ADVERTISEMENT

ಚಾಂಪಿಯನ್ಸ್ ಟ್ರೋಫಿ: 29ರಂದು ಐಸಿಸಿ ಸಭೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 13:37 IST
Last Updated 26 ನವೆಂಬರ್ 2024, 13:37 IST
-
-   

ದುಬೈ: ಮುಂದಿನ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ನಿರ್ಧರಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಮಂಡಳಿಯು ಇದೇ 29ರಂದು ಸಭೆ ಸೇರಲಿದೆ. 

ಫೆಬ್ರುವರಿ–ಮಾರ್ಚ್‌ ಅವಧಿಯಲ್ಲಿ ಟೂರ್ನಿ ನಡೆಸಲಾಗುವುದು ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಇದೀಗ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳುವುದಿಲ್ಲವೆಂದು ಹೇಳಿರುವುದರಿಂದ ಟೂರ್ನಿಯ ದಿನಾಂಕಗಳು ಬದಲಾಗುವ ಸಾಧ್ಯತೆ ಇದೆ. ಅಲ್ಲದೇ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ನಡೆಯುವ ನಿರೀಕ್ಷೆ ಇದೆ. ಯುಎಇಗೆ (ಯುನೈಟೆಡ್ ಅರಬ್ ಎಮಿರೇಟ್ಸ್) ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ.

2008ರಲ್ಲಿ ಮುಂಬೈ ಮೇಲೆ ಉಗ್ರರ ದಾಳಿಯಾದ ನಂತರ ಭಾರತ ತಂಡವು ಪಾಕಿಸ್ತಾನ ಪ್ರವಾಸ ಮಾಡಿಲ್ಲ.  ಭಾರತವು ಹೈಬ್ರಿಡ್ ಮಾದರಿಗೆ ಒತ್ತು ನೀಡುತ್ತಿದೆ.

ADVERTISEMENT

‘ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ನಿಗದಿ ಕುರಿತು ಚರ್ಚಿಸಲು ಇದೇ 29ರಂದು ಐಸಿಸಿ ಮಂಡಳಿಯು ಸಭೆ ಸೇರಲಿದೆ’ ಎಂದು ವಕ್ತಾರರು ತಿಳಿಸಿದ್ದಾರೆ. 

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಇದೇ ಡಿಸೆಂಬರ್ 1ರಂದು ಐಸಿಸಿ ಚೇರ್ಮನ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.