ಲಾಹೋರ್: ಮುಂದಿನ ವರ್ಷದ ಆರಂಭದಲ್ಲಿ ಪಾಕಿಸ್ತಾನದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬರಲು ಬಯಸುವುದಾದರೆ ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ತ್ವರಿತ ವೀಸಾ ನೀಡಲು ಕ್ರಮ ಕೈಗೊಳ್ಳುವುದಾಗಿ ಪಾಕಿಸ್ತಾನದ ಸಚಿವರೂ ಆಗಿರುವ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಕ್ವಿ ಭರವಸೆ ನೀಡಿದ್ದಾರೆ
ನಕ್ವಿ ಅವರು, ಅಮೆರಿಕದಿಂದ ಬಂದಿದ್ದ ಸಿಖ್ ಯಾತ್ರಾರ್ಥಿಗಳ ಜೊತೆ ಸಭೆಯ ವೇಳೆ ಈ ಭರವಸೆ ನೀಡಿದ್ದಾರೆ. ಭಾರತದ ಕ್ರಿಕೆಟ್ ಅಭಿಮಾನಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ನಿರೀಕ್ಷಿಸುವುದಾಗಿ ನಕ್ವಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.