ನಾಟಿಂಗಂ:ಟ್ರೆಂಟ್‌ಬ್ರಿಜ್‌ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ವಿಂಡೀಸ್ ಎದುರು ಬ್ಯಾಟಿಂಗ್ ವೈಫಲ್ಯ ಕಂಡಿದ್ದ ಸರ್ಫರಾಜ್ ಅಹಮದ್ ಬಳಗವು ದಿಟ್ಟ ಹೋರಾಟ ನಡೆಸುವ ಆತ್ಮವಿಶ್ವಾಸದಲ್ಲಿದೆ.
ಕ್ಷಣಕ್ಷಣದ ಸ್ಕೋರ್:https://bit.ly/2QFwVtL
ಮೊದಲ ಪಂದ್ಯದಲ್ಲೇ ದಕ್ಷಿಣ ಆಫ್ರಿಕಾವನ್ನು ಮಣಿಸಿ ವಿಶ್ವಾಸ ಹೆಚ್ಚಿಸಿಕೊಂಡಿರುವಏಯಾನ್ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ತಂಡವು ಈಗ ಮತ್ತೊಂದು ಗೆಲುವಿನ ಮೇಲೆ ಕಣ್ಣಿಟ್ಟಿದೆ. ಟ್ರೆಂಟ್‌ಬ್ರಿಜ್, ಇಂಗ್ಲೆಂಡ್ ಪಾಲಿನ ಅದೃಷ್ಟದ ಅಂಗಳ. ಈ ಮೈದಾನದಲ್ಲಿ ಆಡಿರುವ ಎರಡು ವಿಶ್ವಕಪ್ ಪಂದ್ಯಗಳಲ್ಲೂ ಆಂಗ್ಲರ ನಾಡಿನ ತಂಡವು ಗೆಲುವಿನ ಸಿಹಿ ಸವಿದಿದೆ.
2016 ಆಗಸ್ಟ್ 30ರಂದು ನಡೆದಿದ್ದ ಪಾಕಿಸ್ತಾನ ಎದುರಿನ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 50 ಓವರ್‌ಗಳಲ್ಲಿ 3 ವಿಕೆಟ್‌ಗೆ 444ರನ್ ಗಳಿಸಿ ವಿಶ್ವದಾಖಲೆ ನಿರ್ಮಿಸಿತ್ತು. ಇದೇ ಅಂಗಳದಲ್ಲಿ 2018 ಜೂನ್ 19ರಂದು ಆಯೋಜನೆಯಾಗಿದ್ದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 481ರನ್ ಕಲೆಹಾಕಿ ವಿಶ್ವ ದಾಖಲೆಯನ್ನು ಉತ್ತಮ ಪಡಿಸಿಕೊಂಡಿತ್ತು.
ಬ್ಯಾಟ್ಸ್‌ಮನ್‌ಗಳ ಪಾಲಿನ ಸ್ವರ್ಗ ಎನಿಸಿರುವ ಈ ಅಂಗಳದಲ್ಲಿ ಸೋಮವಾರವೂ ರನ್ ಹೊಳೆ ಹರಿಯುವ ನಿರೀಕ್ಷೆ ಇದೆ.ಗಾಯದಿಂದ ಚೇತರಿಸಿಕೊಂಡಿರುವ ಇಂಗ್ಲೆಂಡ್ ತಂಡದ ಮಾರ್ಕ್ ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.