ADVERTISEMENT

Under 19 ವಿಶ್ವಕಪ್ ಕ್ರಿಕೆಟ್: ಶ್ರೀಲಂಕಾದಿಂದ ದಕ್ಷಿಣ ಆಫ್ರಿಕಾಕ್ಕೆ ಶಿಫ್ಟ್

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2023, 13:37 IST
Last Updated 21 ನವೆಂಬರ್ 2023, 13:37 IST
ಕ್ರಿಕೆಟ್: ಭಾರತಕ್ಕೆ ಲಂಕಾ ಸವಾಲು
ಕ್ರಿಕೆಟ್: ಭಾರತಕ್ಕೆ ಲಂಕಾ ಸವಾಲು   

ಅಹಮದಾಬಾದ್: ಮುಂದಿನ ವರ್ಷ ಶ್ರೀಲಂಕಾದಲ್ಲಿ ನಿಗದಿಯಾಗಿದ್ದ 19 ವರ್ಷದೊಳಗಿನ ಪುರುಷರ ವಿಶ್ವ ಕಪ್‌ ಟೂರ್ನಿಯ ಆತಿಥ್ಯವನ್ನು ಐಸಿಸಿಯು ಮಂಗಳವಾರ ದಕ್ಷಿಣ ಆಫ್ರಿಕಕ್ಕೆ ವಹಿಸಿದೆ.

ಶ್ರೀಲಂಕಾ ಕ್ರಿಕೆಟ್‌ನ (ಎಸ್‌ಎಲ್‌ಸಿ) ಕಾರ್ಯಚಟುವಟಿಕೆಗಳಲ್ಲಿ ಸರ್ಕಾರದ ಹಸ್ತಕ್ಷೇಪದ ಕಾರಣಕ್ಕಾಗಿ ಅಲ್ಲಿನ ಕ್ರಿಕೆಟ್‌ ಮಂಡಳಿಯನ್ನು ಅಮಾನತು ಮಾಡಿದ 11 ದಿನಗಳ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಈ ನಿರ್ಧಾರ ಕೈಗೊಂಡಿದೆ.

ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಆಡಳಿತ ಸಮಿತಿ ಇಲ್ಲಿ ಸಭೆ ಸೇರಿದ್ದು, ಎಸ್‌ಎಲ್‌ಸಿಯನ್ನು ಅಮಾನತು ಮಾಡಿದ ಕ್ರಮವನ್ನು ಖಚಿತಪಡಿಸಿದೆ. ವಯೋವರ್ಗ ಟೂರ್ನಿಯನ್ನು ಸ್ಥಳಾಂತರ ಮಾಡಿದ ಕ್ರಮಕ್ಕೂ ಸಮ್ಮತಿ ನೀಡಿದೆ.

ADVERTISEMENT

‘ಶ್ರೀಲಂಕಾ ಕ್ರಿಕೆಟ್ಅನ್ನು ಅಮಾನತಿನಲ್ಲಿಟ್ಟಿರುವ ಕಾರಣ 19 ವರ್ಷದೊಳಗಿನವರ ವಿಶ್ವಕಪ್‌ ಟೂರ್ನಿಯನ್ನು ದಕ್ಷಿಣ ಆಫ್ರಿಕಕ್ಕೆ ಸ್ಥಳಾಂತರಿಸಲಾಗಿದೆ. ಈ ನಿರ್ಧಾರಕ್ಕೆ ಐಸಿಸಿ ಆಡಳಿತ ಮಂಡಳಿಯಲ್ಲಿ ಅನುನೋದನೆ ನೀಡಲಾಗಿದೆ’ ಎಂದು ಮಂಡಳಿಯ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.