ದುಬೈ: ಭಾರತ ತಂಡದ ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ಅವರು ಐಸಿಸಿ ಏಕದಿನ ಕ್ರಿಕೆಟ್ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ.
ಪೋರ್ಟ್ ಆಫ್ ಸ್ಪೇನ್‌ನಲ್ಲಿ ಶುಕ್ರವಾರ ನಡೆದ ವೆಸ್ಟ್ ಇಂಡೀಸ್ ಎದುರಿನ ಸರಣಿಯ ಮೊದಲ ಪಂದ್ಯದಲ್ಲಿ ಧವನ್ 97 ರನ್ ಗಳಿಸಿ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಅವರ ರ‍್ಯಾಂಕಿಂಗ್ ಏರಿಕೆಗೆ ಕಾರಣವಾಗಿದೆ. ಸದ್ಯ ಅವರು ಒಂದು ಸ್ಥಾನ ಬಡ್ತಿ ಪಡೆದು ಜಂಟಿ 13ನೇ ಸ್ಥಾನ ತಲುಪಿದ್ದಾರೆ.
ಮೊದಲ ಎರಡು ಪಂದ್ಯಗಳಲ್ಲಿ ಅರ್ಧಶತಕಗಳನ್ನು (ಕ್ರಮವಾಗಿ 54 ಮತ್ತು 63) ಸಿಡಿಸಿರುವ ಶ್ರೇಯಸ್ ಅಯ್ಯರ್ 20 ಸ್ಥಾನ ಏರಿಕೆ ದಾಖಲಿಸಿ ಜಂಟಿ 54ನೇ ಸ್ಥಾನದಲ್ಲಿದ್ದಾರೆ. ಈ ಸರಣಿಗೆ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಲಾ ಒಂದು ಸ್ಥಾನ ಕುಸಿತ ಕಂಡಿದ್ದು ಕ್ರಮವಾಗಿ ಐದು ಮತ್ತು ಆರನೇ ಸ್ಥಾನದಲ್ಲಿದ್ದಾರೆ.
ವೆಸ್ಟ್ ಇಂಡೀಸ್ ತಂಡದ ಶಾಯ್ ಹೋಪ್ 12ನೇ ಸ್ಥಾನದಲ್ಲಿದ್ದಾರೆ. ಭಾರತ ಎದುರಿನ ಎರಡನೇ ಪಂದ್ಯದಲ್ಲಿ ಅವರು ಶತಕ (115) ಸಿಡಿಸಿದ್ದರು.
ಪಾಕಿಸ್ತಾನದ ಬಾಬರ್ ಆಜಂ ಏಕದಿನ ಮತ್ತು ಟಿ20 ಎರಡೂ ಮಾದರಿಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಬೌಲರ್‌ಗಳ ವಿಭಾಗದಲ್ಲಿ ವೇಗಿ ಭಾರತದ ಮೊಹಮ್ಮದ್ ಸಿರಾಜ್ ಅಗ್ರ 100ರ ಪಟ್ಟಿಯೊಳಗೆ ಸ್ಥಾನ ಪಡೆದಿದ್ದು, ಸದ್ಯ 97ನೇ ಕ್ರಮಾಂಕದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.