ದುಬೈ: ಭಾರತದ ಯುವ ಬ್ಯಾಟ್ಸ್‌ವುಮನ್ ಶೆಫಾಲಿ ವರ್ಮಾ ಅವರು ಐಸಿಸಿ ಮಹಿಳಾ ಟ್ವೆಂಟಿ–20 ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಮಂಗಳವಾರ ಪ್ರಕಟಗೊಂಡಿರುವ ರ‍್ಯಾಂಕಿಂಗ್ ಪಟ್ಟಿಯಲ್ಲಿ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರಿಗೆ ಏಳನೇ ಸ್ಥಾನ ಲಭಿಸಿದೆ.
ಬ್ಯಾಟ್ಸ್‌ವುಮನ್‌ಗಳ ವಿಭಾಗದಲ್ಲಿ ಶೆಫಾಲಿ ಅವರು 744 ಪಾಯಿಂಟ್ಸ್ ಕಲೆಹಾಕಿದ್ದು, ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಬೆಥ್ ಮೂನಿ (748) ಅವರಿಗಿಂತ ಕೇವಲ ನಾಲ್ಕು ಪಾಯಿಂಟ್ಸ್ ಹಿಂದಿದ್ದಾರೆ. ಮಂದಾನ ಬಳಿ 693 ಪಾಯಿಂಟ್‌ಗಳಿವೆ.
ಜೆಮಿಮಾ ರಾಡ್ರಿಗಸ್ (643) ಒಂಬತ್ತನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಸೋಫಿ ಡಿವೈನ್, ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್ ಹಾಗೂ ಅಲಿಸ್ಸಾ ಹೀಲಿ ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿದ್ದಾರೆ.
ಬೌಲರ್‌ಗಳ ವಿಭಾಗದಲ್ಲಿ ಭಾರತದ ಆಲ್‌ರೌಂಡರ್ ದೀಪ್ತಿ ಶರ್ಮಾ (6ನೇ ಸ್ಥಾನ), ಸ್ಪಿನ್ನರ್‌ಗಳಾದ ರಾಧಾ ಯಾದವ್ (8) ಹಾಗೂ ಪೂನಂ ಯಾದವ್ (9) ಅಗ್ರ 10ರ ಪಟ್ಟಿಯಲ್ಲಿ ಇದ್ದಾರೆ. ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ ಮೊದಲ ಸ್ಥಾನದಲ್ಲೇ ಮುಂದುವರಿದಿದ್ದಾರೆ.
ಆಲ್‌ರೌಂಡರ್‌ಗಳ ವಿಭಾಗದಲ್ಲಿ ದೀಪ್ತಿ ಶರ್ಮಾ 302 ಪಾಯಿಂಟ್ಸ್‌ನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಭಾರತ ತಂಡ ಒಂದು ವರ್ಷದಿಂದ ಯಾವುದೇ ಅಂತರರಾಷ್ಟ್ರೀಯ ಟ್ವೆಂಟಿ–20 ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. 2020ರ ಮಾರ್ಚ್ 8ರಂದು ನಡೆದ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದೇ ಕೊನೆಯ ಪಂದ್ಯವಾಗಿದೆ.
ಮಾರ್ಚ್ 20ರಿಂದ ಆರಂಭವಾಗಿವ ಟ್ವೆಂಟಿ–20 ಸರಣಿಯಲ್ಲಿ ಭಾರತದ ಮಹಿಳೆಯರು ದಕ್ಷಿಣ ಆಫ್ರಿಕಾ ಎದುರು ಆಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.