ದುಬೈ: ಆರಂಭಿಕ ಆಟಗಾರ್ತಿ ಬೆತ್ ಮೂನಿ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡವು ಮಹಿಳಾ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಜಯದ ಆರಂಭ ಮಾಡಿತು.
ಶನಿವಾರ ದುಬೈಯಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 6 ವಿಕೆಟ್ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿತ್ತು. ನೀಲಾಕ್ಷಿ ಡಿ ಸಿಲ್ವಾ 40 ಎಸೆತಗಳಲ್ಲಿ 29, ಹರ್ಷಿತಾ ಮಾದವಿ 23 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಸಾಧಾರಣ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 14.2 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 94 ರನ್ ಗಳಿಸಿತು.
ಆಸ್ಟ್ರೇಲಿಯಾ ಪರ ಬೆತ್ ಮೂನಿ 38 ಎಸೆತಗಳಲ್ಲಿ 4 ಬೌಂಡರಿ ಸಹಿತ 43 ರನ್ ಗಳಿಸಿ ಅಜೇಯರಾಗಿ ಉಳಿದರು. ಎಲ್ಲಿಸ್ ಪೆರ್ರಿ 17, ಆಶ್ಲೀಗ್ ಗಾರ್ಡ್ನರ್ 12 ರನ್ ಗಳಿಸಿ ತಂಡಕ್ಕೆ ಆಸರೆಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.