ದುಬೈ: ದಕ್ಷಿಣ ಆಫ್ರಿಕಾ ತಂಡವು ಐಸಿಸಿ ಮಹಿಳೆಯರ ಟಿ20 ವಿಶ್ವಕಪ್‌ನ ಬಿ ಗುಂಪಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಶನಿವಾರ ಏಳು ವಿಕೆಟ್‌ಗಳಿಂದ ಮಣಿಸಿತು.
ನಾಲ್ಕು ಪಂದ್ಯಗಳಲ್ಲಿ ಮೂರನ್ನು ಗೆದ್ದು, ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಸೆಮಿಫೈನಲ್ ಭವಿಷ್ಯ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ಕೈಯಲ್ಲಿದೆ. ವಿಂಡೀಸ್ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು ಎರಡನೇ ಸ್ಥಾನದಲ್ಲಿದ್ದರೆ, ಆಡಿರುವ ಎರಡೂ ಪಂದ್ಯಗಳನ್ನು ಜಯಿಸಿದ ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿದೆ.
ಬಾಂಗ್ಲಾ ತಂಡವು ಸೋಭಾನ ಮೊಸ್ತರಿ (38;43ಎ) ಮತ್ತು ನಾಯಕಿ ನಿಗರ್ ಸುಲ್ತಾನಾ (ಔಟಾಗದೇ 32; 38ಎ) ಅವರ ಬ್ಯಾಟಿಂಗ್ ಬಲದಿಂದ 20 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 106 ಗಳಿಸಲಷ್ಟೇ ಶಕ್ತವಾಯಿತು. ಸುಲಭ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡ 16 ಎಸೆತ ಬಾಕಿ ಇರುವಂತೆ ಗೆಲುವಿನ ದಡ ಸೇರಿತು. ಗೆಲುವಿಗೆ ಉಪಯುಕ್ತ ಕೊಡುಗೆ ನೀಡಿದ ತಜ್ಮಿನ್ ಬ್ರಿಟ್ಸ್ (42;41ಎ) ಪಂದ್ಯದ ಆಟಗಾರ್ತಿ ಗೌರವಕ್ಕೆ ಪಾತ್ರವಾದರು.
ಸಂಕ್ಷಿಪ್ತ ಸ್ಕೋರ್: ಬಾಂಗ್ಲಾದೇಶ: 20 ಓವರ್‌ಗಳಲ್ಲಿ 3ಕ್ಕೆ 106 (ಸೋಭಾನ ಮೊಸ್ತರಿ 38, ನಿಗರ್ ಸುಲ್ತಾನಾ 32; ಮರಿಜಾನ್ ಕಪ್ 10ಕ್ಕೆ 1). ದಕ್ಷಿಣ ಆಫ್ರಿಕಾ: 17.2 ಓವರ್‌ಗಳಲ್ಲಿ 3ಕ್ಕೆ 107 (ತಜ್ಮಿನ್ ಬ್ರಿಟ್ಸ್ 42, ಅನ್ನೆಕೆ ಬಾಷ್ 25; ಫಾಹಿಮಾ ಖತುನ್ 19ಕ್ಕೆ 2). ಫಲಿತಾಂಶ: ದಕ್ಷಿಣ ಆಫ್ರಿಕಾಕ್ಕೆ 7 ವಿಕೆಟ್‌ಗಳ ಜಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.