ಆಕ್ಲೆಂಡ್: ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಸರಿಗಟ್ಟಿದ್ದಾರೆ.
ಈ ಕುರಿತು ಎನ್‌ಡಿಟಿವಿ ವರದಿ ಮಾಡಿದೆ.
ನ್ಯೂಜಿಲೆಂಡ್‌ನ ಈಡನ್ ಪಾರ್ಕ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಮಿಥಾಲಿ ಆಕರ್ಷಕ ಅರ್ಧಶತಕ ಗಳಿಸುವ ಮೂಲಕ ಫಾರ್ಮ್‌ಗೆ ಮರಳಿದ್ದಾರೆ.
ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ 12ನೇ ಬಾರಿಗೆ 50ಕ್ಕೂ ಹೆಚ್ಚು ರನ್ ಗಳಿಸಿದ ಖ್ಯಾತಿಗೆ ಮಿಥಾಲಿ ಪಾತ್ರರಾಗಿದ್ದಾರೆ. ಈ ಮೂಲಕ ನ್ಯೂಜಿಲೆಂಡ್‌ನ ಡೆಬಿ ಹಾಕ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.
ಹಾಗೆಯೇ ಮಹಿಳಾ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ (ಎಂಟು) ನಾಯಕಿ ಎಂಬ ದಾಖಲೆಗೆ ಭಾಜನರಾಗಿದ್ದಾರೆ.
ಒತ್ತಡದ ಪರಿಸ್ಥಿತಿಯಲ್ಲಿ ಸಮಯೋಚಿತ ಇನ್ನಿಂಗ್ಸ್ ಕಟ್ಟಿದ ಮಿಥಾಲಿ ಏಕದಿನದಲ್ಲಿ 63ನೇ ಅರ್ಧಶತಕವನ್ನು ಗಳಿಸಿದರು. 96 ಎಸೆತಗಳನ್ನು ಎದುರಿಸಿದ ಮಿಥಾಲಿ, ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 68 ರನ್ ಗಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.