ADVERTISEMENT

ICC World Cup 2023: ಭಾರತ–ಪಾಕಿಸ್ತಾನ ಪಂದ್ಯದ ದಿನಾಂಕ ಬದಲು

ಪಿಟಿಐ
Published 2 ಆಗಸ್ಟ್ 2023, 2:10 IST
Last Updated 2 ಆಗಸ್ಟ್ 2023, 2:10 IST
   

ಕರಾಚಿ: 2023ರ ಏಕದಿನ ಕ್ರಿಕೆಟ್‌ ವಿಶ್ವಕಪ್ ಟೂರ್ನಿಯಲ್ಲಿ (ICC World Cup 2023) ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಅಕ್ಟೋಬರ್‌ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದ್ದ ಪಂದ್ಯ ಒಂದು ದಿನ ಮುಂಚಿತವಾಗಿ ನಡೆಯಲಿದೆ.

ಅಕ್ಟೋಬರ್‌ 14ರಂದು ಉಭಯ ತಂಡಗಳು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಐಸಿಸಿ ಬಿಡುಗಡೆ ಮಾಡಿದ್ದ ವೇಳಾಪಟ್ಟಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಅಕ್ಟೋಬರ್‌ 15ರಂದು ಪಂದ್ಯ ನಿಗದಿಯಾಗಿತ್ತು. ಆದರೆ ನವರಾತ್ರಿ ಹಬ್ಬ ಇರುವುದರಿಂದ ಭದ್ರತಾ ಕಾರಣ ನೀಡಿ ಪಾಕಿಸ್ತಾನ ಆಡಲು ಹಿಂದೇಟು ಹಾಕಿತ್ತು.

ADVERTISEMENT

ಭಾರತ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯದ ದಿನಾಂಕ ಬದಲಾವಣೆ ಬಗ್ಗೆ ಐಸಿಸಿ ಹಾಗೂ ಬಿಸಿಸಿಐ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯನ್ನು (ಪಿಸಿಬಿ) ಸಂಪರ್ಕಿಸಿತ್ತು.

ಶ್ರೀಲಂಕಾ ವಿರುದ್ಧ ಅಕ್ಟೋಬರ್‌ 12 ರಂದು ಅಹಮದಾಬಾದ್‌ನಲ್ಲಿ ನಡೆಯಬೇಕಿದ್ದ ಪಂದ್ಯ ಎರಡು ದಿನ ಮುಂಚಿತವಾಗಿ ಅಂದರೆ ಅಕ್ಟೋಬರ್‌ 10 ರಂದು ನಡೆಯಲಿದೆ. ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ 3 ದಿನಗಳ ವಿರಾಮ ಸಿಗಲಿದೆ.

ಎರಡು ಪಂದ್ಯಗಳ ವೇಳಾಪಟ್ಟಿ ಬದಲಾಗಿದ್ದರಿಂದ, ಬೇರೆ ತಂಡಗಳ ಪಂದ್ಯಗಳ ಮೇಲೂ ಇದರ ಪರಿಣಾಮ ಬೀಳಲಿದ್ದು, ಶೀಘ್ರವೇ ಐಸಿಸಿ ಹೊಸ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.