ಬೆಂಗಳೂರು: ಈ ಸಾರಿಯ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತ ಫೈನಲ್ ಪ್ರವೇಶಿಸಿಯೂ ಕಪ್ ಗೆಲ್ಲಲಿಲ್ಲ ಎಂಬ ಬೇಸರ ಕೋಟ್ಯಂತರ ಅಭಿಮಾನಿಗಳಲ್ಲಿ ಮನೆ ಮಾಡಿದೆ.
ಭಾರತದ ಸೋಲಿಗೆ ಅನೇಕರು ಅನೇಕ ರೀತಿಯ ಕಾರಣಗಳನ್ನು, ವಿಶ್ಲೇಷಣೆಗಳನ್ನು ನೀಡುತ್ತಿದ್ದರೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಬೇರೆಯದ್ದೇ ವಿಚಾರ ತೇಲಿಬಿಟ್ಟಿದ್ದಾರೆ.
ಕ್ರಿಕೆಟ್‌ನಲ್ಲಿ ಮೀಸಲಾತಿ ಇರಬೇಕು ಎಂದು ಅವರು ಈ ಹಿಂದೆಯೂ ಅನೇಕ ಬಾರಿ ಹೇಳಿದ್ದರು.
ಇದೀಗ ಪುನಃ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನಾನು ಮತ್ತೆ ಹೇಳುತ್ತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿಯ ಅಗತ್ಯವಿದೆ’ ಎಂದಿದ್ದಾರೆ.
‘ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ, ಭಾರತ ಈ 2023ರ ವಿಶ್ವಕಪ್ ಅನ್ನು ಸುಲಭವಾಗಿ ಗೆಲ್ಲುತ್ತಿತ್ತು’ ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಪರ–ವಿರೋಧದ ಚರ್ಚೆಗೆ ಕಿಡಿಹೊತ್ತಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.