ಧರ್ಮಶಾಲಾ: 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತ ಹಾಗೂ ಇಂಗ್ಲೆಂಡ್ ಸರಣಿಯಲ್ಲಿ ವಿಶಿಷ್ಟ ದಾಖಲೆಯೊಂದು ಸೃಷ್ಟಿಯಾಗಿದೆ.
ಟೆಸ್ಟ್ ಸರಣಿಯೊಂದರಲ್ಲಿ ಇದೇ ಮೊದಲ ಬಾರಿಗೆ 100 ಸಿಕ್ಸರ್‌ಗಳ ಮೈಲಿಗಲ್ಲು ಸಾಧಿಸಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಟ್ಟು 102 ಸಿಕ್ಸರ್‌ಗಳು ದಾಖಲಾಗಿವೆ.
ಕಳೆದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಣ ಆ್ಯಶಸ್ ಸರಣಿಯಲ್ಲಿ 74 ಸಿಕ್ಸರ್‌ಗಳು ದಾಖಲಾಗಿದ್ದವು. ಇದು ಈವರೆಗಿನ ದಾಖಲೆಯಾಗಿತ್ತು.
ಈ ಪೈಕಿ ಟೀಮ್ ಇಂಡಿಯಾದ ಬ್ಯಾಟರ್‌ಗಳು 72 ಹಾಗೂ ಇಂಗ್ಲೆಂಡ್ ದಾಂಡಿಗರು 30 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.
22 ವರ್ಷದ ಜೈಸ್ವಾಲ್ ಈ ಸರಣಿಯಲ್ಲಿ ಅತಿ ಹೆಚ್ಚು 26 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅಲ್ಲದೆ ಎರಡು ದ್ವಿಶತಕ ಸೇರಿದಂತೆ 700ಕ್ಕೂ ಹೆಚ್ಚು ರನ್ ಕಲೆ ಹಾಕಿದ್ದಾರೆ.
ಟೆಸ್ಟ್ ಸರಣಿಯಲ್ಲಿ ಗರಿಷ್ಠ ಸಿಕ್ಸರ್‌ಗಳು:
ಭಾರತ-ಇಂಗ್ಲೆಂಡ್ (2024): 102
ಇಂಗ್ಲೆಂಡ್-ಆಸ್ಟ್ರೇಲಿಯಾ (2024): 74
ಆಸ್ಟ್ರೇಲಿಯಾ-ಇಂಗ್ಲೆಂಡ್ (2013/14): 65
ಭಾರತ-ದ.ಆಫ್ರಿಕಾ (2019): 65
ಪಾಕಿಸ್ತಾನ-ನ್ಯೂಜಿಲೆಂಡ್ (2014): 59
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.