ಬರ್ಮಿಂಗ್‌ಹ್ಯಾಮ್:ಕಾಮನ್‌ವೆಲ್ತ್ ಕ್ರೀಡಾಕೂಟದ ಮೊದಲ ಟಿ20 ಕ್ರಿಕೆಟ್‌ಪಂದ್ಯದಲ್ಲಿಅಮೋಘ ಆಟವಾಡಿದಆಸ್ಟ್ರೇಲಿಯಾ ಮಹಿಳಾ ತಂಡದ ಆ್ಯಶ್ಲೆ ಗಾರ್ಡನರ್ ಹಾಗೂಗ್ರೇಸ್ ಹ್ಯಾರಿಸ್,ಭಾರತದ ಕೈ ಯಿಂದ ಜಯ ಕಸಿದುಕೊಂಡರು.
ಇಲ್ಲಿನ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ,ಆರಂಭಿಕ ಬ್ಯಾಟರ್ ಶೆಫಾಲಿ ವರ್ಮಾ (48) ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ (52) ಅವರ ಉತ್ತಮ ಆಟದ ನೆರವಿನಿಂದನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತ್ತು.
ಪೆಟ್ಟುಕೊಟ್ಟ ರೇಣುಕಾ; ತಿರುಗೇಟು ನೀಡಿದಆ್ಯಶ್ಲೆ
ಸವಾಲಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾಗೆ ವೇಗಿ ರೇಣುಕಾ ಸಿಂಗ್ ಆಘಾತ ನೀಡಿದರು. ತಂಡದ ಮೊತ್ತ ಕೇವಲ 34 ರನ್ ಆಗುವಷ್ಟರಲ್ಲಿ ಅಗ್ರ ಕ್ರಮಾಂಕದ ನಾಲ್ವರು ಬ್ಯಾಟರ್‌ಗಳಿಗೆ ಪೆವಿಲಿಯನ್ ಹಾದಿ ತೋರಿದ ರೇಣುಕಾ, ಭಾರತಕ್ಕೆ ಮೇಲುಗೈ ತಂದುಕೊಟ್ಟರು. ಅವರು ನಾಲ್ಕು ಓವರ್‌ಗಳಲ್ಲಿ 18 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಬಳಿಸಿ ಮಿಂಚಿದರು.
ಒಂದು ಹಂತದಲ್ಲಿ 49 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿದ್ದ ಆಸಿಸ್, ಭಾರತಕ್ಕೆ ಸುಲಭ ತುತ್ತಾಗುವ ಭೀತಿಯಲ್ಲಿತ್ತು. ಆದರೆ, ಈ ಹಂತದಲ್ಲಿ ಜೊತೆಯಾದಗಾರ್ಡನರ್ ಹಾಗೂ ಹ್ಯಾರಿಸ್‌ಎಲ್ಲರ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದರು. ಆರನೇ ವಿಕೆಟ್‌ಗೆ ಅರ್ಧಶತಕದ (51 ರನ್)ಜೊತೆಯಾಟವಾಡಿದ ಈ ಜೋಡಿ, ತಮ್ಮ ತಂಡದ ಇನಿಂಗ್ಸ್‌ಗೆ ಚೇತರಿಕೆ ನೀಡಿತು.
ಹ್ಯಾರಿಸ್ ಕೇವಲ 20 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 37 ರನ್ ಗಳಿಸಿ ಔಟಾದರು.ಗಾರ್ಡನರ್ 35 ಎಸೆತಗಳಲ್ಲಿ 52 ರನ್ ಬಾರಿಸಿ ಅಜೇಯ ಆಟವಾಡಿದರು. ಕೊನೆಯಲ್ಲಿ ಅಲಾನ ಕಿಂಗ್ (18*) ಬೀಸಾಟವಾಡಿದರು. ಹೀಗಾಗಿ ಆಸಿಸ್ ಇನ್ನೂ ಒಂದು ಓವರ್ ಬಾಕಿ ಇರುವಂತೆಯೇ 3 ವಿಕೆಟ್ ಅಂತರದ ಜಯ ಸಾಧಿಸಿತು.
ಇದರೊಂದಿಗೆಆಸ್ಟ್ರೇಲಿಯಾ, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿತು.
ಭಾರತ ತಂಡವು ಜುಲೈ 31 ರಂದು ನಡೆಯುವ ತನ್ನ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದೆ. ಅದೇದಿನ ಬಾರ್ಬಡಾಸ್ ವಿರುದ್ಧ ಆಸ್ಟ್ರೇಲಿಯಾ ಸೆಣಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.