ಮೊಹಾಲಿ: ಭಾರತ ವಿರುದ್ಧ ನಡೆಯಲಿರುವ ಟ್ವೆಂಟಿ-20 ಸರಣಿಯಲ್ಲಿ ಅಫ್ಗಾನಿಸ್ತಾನ ತಂಡಕ್ಕೆ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಅನುಪಸ್ಥಿತಿ ಕಾಡಲಿದೆ.
ಬೆನ್ನುನೋವಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ರಶೀದ್ ಖಾನ್ ಸಂಪೂರ್ಣವಾಗಿ ಚೇತರಿಸಿಲ್ಲ. ಹಾಗಾಗಿ ಈ ಟೂರ್ನಿಯಲ್ಲಿ ಅವರು ಆಡುವುದಿಲ್ಲ.
ಈ ಕುರಿತು ಅಫ್ಗಾನಿಸ್ತಾನ ಕ್ರಿಕೆಟ್ ತಂಡದ ನಾಯಕ ಇಬ್ರಾಹಿಂ ಜದ್ರಾನ್ ಮಾಹಿತಿ ನೀಡಿದ್ದಾರೆ.
ರಶೀದ್ ಖಾನ್ ಸಂಪೂರ್ಣ ಫಿಟ್ ಆಗಿಲ್ಲ. ಅವರು ಪುನಶ್ಚೇತನ ಹಂತದಲ್ಲಿದ್ದಾರೆ. ಅವರ ಅಲಭ್ಯತೆ ತಂಡಕ್ಕೆ ಕಾಡಲಿದೆ. ಆದರೂ ಎಂತಹ ಪರಿಸ್ಥಿತಿಯನ್ನು ಎದುರಿಸಲು ತಂಡ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಮುಜೀಬ್ ಜದ್ರಾನ್‌ರಂತಹ ಆಟಗಾರರು ಹೆಚ್ಚು ಕ್ರಿಕೆಟ್ ಆಡಿದ್ದಾರೆ. ಅವರ ಮೇಲೆ ನಮಗೆ ನಂಬಿಕೆಯಿದೆ ಎಂದು ಅವರು ತಿಳಿಸಿದ್ದಾರೆ.
ಭಾರತ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅಫ್ಗಾನಿಸ್ತಾನ ಭಾಗವಹಿಸಲಿದೆ. ಮೊದಲ ಪಂದ್ಯ ನಾಳೆ (ಗುರುವಾರ) ಮೊಹಾಲಿಯಲ್ಲಿ ನಡೆಯಲಿದೆ. ಸರಣಿಯ ಅಂತಿಮ ಪಂದ್ಯ ಜನವರಿ 17ರಂದು ಬೆಂಗಳೂರಿನಲ್ಲಿ ನಿಗದಿಯಾಗಿದೆ.
ವೇಳಾಪಟ್ಟಿ ಇಂತಿದೆ:
ಮೊದಲ ಟಿ20: ಜ.11, ಮೊಹಾಲಿ
ಎರಡನೇ ಟಿ20: ಜ.14, ಇಂದೋರ್
ಅಂತಿಮ ಟಿ20: ಜ. 17, ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.