ADVERTISEMENT

IND vs AUS 1st Test: ಮೊದಲ ದಿನದ ಊಟದ ವಿರಾಮಕ್ಕೆ ಆಸ್ಟ್ರೇಲಿಯಾ 76/2

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಫೆಬ್ರುವರಿ 2023, 6:33 IST
Last Updated 9 ಫೆಬ್ರುವರಿ 2023, 6:33 IST
   

ನಾಗಪುರ: ಇಲ್ಲಿನ ಜಮ್ತಾದ ವಿಸಿಎ ಕ್ರೀಡಾಂಗಣದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆರಂಭವಾಗಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಅವಧಿಯಲ್ಲಿ ಭಾರತೀಯ ವೇಗಿಗಳು ಮೇಲುಗೈ ಸಾಧಿಸಿದ್ದಾರೆ.

ಮೊದಲ ದಿನದ ಆಟದ ಊಟದ ವಿರಾಮದ ಹೊತ್ತಿಗೆ ಆಸ್ಟ್ರೇಲಿಯಾ 32 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದೆ.

2 ರನ್ ಗಳಿಸುವಷ್ಟರಲ್ಲಿ ಓಪನರ್‌ಗಳಾದ ಉಸ್ಮಾನ್ ಖವಾಜ (1) ಹಾಗೂ ಡೇವಿಡ್ ವಾರ್ನರ್ (1) ವಿಕೆಟ್‌ಗಳನ್ನು ಕಳೆದುಕೊಂಡ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿತ್ತು.

ADVERTISEMENT

ಈ ಎರಡು ವಿಕೆಟ್‌ಗಳನ್ನು ಬಲಗೈ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಹಂಚಿಕೊಂಡರು.

ಈ ಹಂತದಲ್ಲಿ ಜೊತೆಗೂಡಿದ ಮಾರ್ನಸ್ ಲಾಬುಶೇನ್ ಹಾಗೂ ಮಾಜಿ ನಾಯಕ ಸ್ಟೀವ್ ಸ್ಮಿತ್ ಮುರಿಯದ ಮೂರನೇ ವಿಕೆಟ್‌ಗೆ ಅಮೂಲ್ಯ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ.

47 ರನ್ ಗಳಿಸಿ ಕ್ರೀಸಿನಲ್ಲಿರುವ ಲಾಬುಶೇನ್, ಅರ್ಧಶತಕದತ್ತ ಮುನ್ನುಗ್ಗುತ್ತಿದ್ದಾರೆ. ಅವರಿಗೆ ಸ್ಮಿತ್ (ಅಜೇಯ 19) ಸಾಥ್ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.