ADVERTISEMENT

IND vs AUS: ಗೆದ್ದವರಿಗೆ ಟ್ರೋಫಿ; ಭಾರತ ಫೀಲ್ಡಿಂಗ್, ಪಂತ್ ಔಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಸೆಪ್ಟೆಂಬರ್ 2022, 13:22 IST
Last Updated 25 ಸೆಪ್ಟೆಂಬರ್ 2022, 13:22 IST
ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಗೆಲುವಿನ ಕ್ಷಣ
ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾದ ಗೆಲುವಿನ ಕ್ಷಣ   

ಹೈದರಾಬಾದ್: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

1-1ರ ಸಮಬಲ ಸಾಧಿಸಿರುವ ಹಿನ್ನೆಲೆಯಲ್ಲಿ ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡಕ್ಕೆ ಸರಣಿ ಪಾಲಾಗಲಿದೆ.

ಅಂತಿಮ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ತರಲಾಗಿದ್ದು, ಬಲಗೈ ವೇಗದ ಬೌಲರ್ ಭುವನೇಶ್ವರ್ ಕುಮಾರ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ.

ADVERTISEMENT

ಭುವಿ ಅವರಿಗಾಗಿ ರಿಷಭ್ ಪಂತ್ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ.

ಅತ್ತ ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಸೀನ್ ಅಬಾಟ್ ಸ್ಥಾನದಲ್ಲಿ ಜೋಶ್ ಇಂಗ್ಲಿಸ್ ಕಾಣಿಸಿಕೊಂಡಿದ್ದಾರೆ.

ಭಾರತದ ಪ್ಲೇಯಿಂಗ್ ಇಲೆವೆನ್ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್‌ಪ್ರೀತ್ ಬೂಮ್ರಾ, ಯಜುವೇಂದ್ರ ಚಾಹಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.