ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಭಾರತ ತಂಡಕ್ಕೆ 444 ರನ್‌ಗಳ ಸವಾಲಿನ ಗುರಿ ನೀಡಿದೆ.
ಇಲ್ಲಿನ 'ದ ಒವಲ್' ಕ್ರೀಡಾಂಗಣದಲ್ಲಿ ಬುಧವಾರ ಆರಂಭವಾದ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 173 ರನ್‌ಗಳ ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ, ಎರಡನೇ ಇನಿಂಗ್ಸ್‌ನಲ್ಲಿ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಇದರೊಂದಿಗೆ ಭಾರತಕ್ಕೆ ಸವಾಲಿನ ಗುರಿ ನೀಡಿದೆ.
ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡ 4 ವಿಕೆಟ್‌ಗಳನ್ನು ಕಳೆದುಕೊಂಡು 123 ರನ್ ಗಳಿಸಿತ್ತು. ಇಂದು ಆ ಮೊತ್ತಕ್ಕೆ 147 ರನ್ ಹೆಚ್ಚುವರಿಯಾಗಿ ಸೇರಿಸಿತು.
ಸದ್ಯ ಗುರಿ ಬೆನ್ನತ್ತಿರುವ ಭಾರತ 7 ಓವರ್‌ಗಳ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 41 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ (21) ಮತ್ತು ಯುವ ಬ್ಯಾಟರ್ ಶುಭಮನ್ ಗಿಲ್ (18) ಕ್ರೀಸ್‌ನಲ್ಲಿದ್ದಾರೆ. ಗೆಲ್ಲಲು ಇನ್ನೂ 403 ರನ್ ಗಳಿಸಬೇಕಿದೆ.
ಇಂದು ಇನ್ನೂ ಒಂದು ಅವಧಿ ಹಾಗೂ ನಾಳೆಯ ಆಟ ಬಾಕಿ ಇರುವುದರಿಂದ ಫಲಿತಾಂಶ ನಿರೀಕ್ಷಿಸಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.