ಚೆನ್ನೈ: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಎಡಗೈ ಬ್ಯಾಟರ್ ರಿಷಭ್ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ ಆರನೇ ಶತಕದ ಸಾಧನೆ ಮಾಡಿದ್ದಾರೆ.
ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಕೆಟ್ ಕೀಪರ್ ಬ್ಯಾಟರ್‌ಗಳ ಪಟ್ಟಿಯಲ್ಲಿ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಪಂತ್ ಸ್ಮರಣೀಯ ಶತಕ ಗಳಿಸಿದರು. 58ನೇ ಇನಿಂಗ್ಸ್‌ನಲ್ಲಿ ಪಂತ್ ಈ ಸಾಧನೆ ಮಾಡಿದ್ದಾರೆ.
ಆ ಮೂಲಕ 2022ರ ಡಿಸೆಂಬರ್‌ನಲ್ಲಿ ಕಾರು ಅಪಘಾತದ ಬಳಿಕ ಕ್ರಿಕೆಟ್‌ನಿಂದ ದೀರ್ಘ ಸಮಯದಿಂದ ದೂರವುಳಿದಿದ್ದ ಪಂತ್, ಶತಕದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಭರ್ಜರಿ ಪುನರಾಗಮನ ಮಾಡಿದ್ದಾರೆ.
ಕಾರು ಅಪಘಾತದಲ್ಲಿ ಪವಾಡ ಸದೃಶ್ಯ ಪಾರಾಗಿದ್ದ ಪಂತ್...
2022ರ ಡಿಸೆಂಬರ್ 30ರಂದು ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ತಮ್ಮ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಹೊಸ ವರ್ಷಾಚರಣೆಗಾಗಿ ಪಂತ್ ರೂರ್ಕಿಯಲ್ಲಿರುವ ಮನೆಗೆ ಪ್ರಯಾಣಿಸುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿತ್ತು.
ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಪಂತ್ ಅವರ ತಲೆ, ಬೆನ್ನು, ಮಂಡಿ, ಕಾಲಿಗೆ ಗಾಯಗಳಾಗಿದ್ದವು. ಬಲಿಗಾಲಿನ ಮಂಡಿಯ ಲಿಗಮೆಂಟ್ (ಅಸ್ಥಿರಜ್ಜು) ಗಾಯಕ್ಕೆ ತುತ್ತಾಗಿದ್ದ ಪಂತ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ವಿಕೆಟ್ ಕೀಪರ್ ಬ್ಯಾಟರ್‌ಗಳ ಪಟ್ಟಿ:
ರಿಷಭ್ ಪಂತ್: 6 (58 ಇನಿಂಗ್ಸ್)
ಮಹೇಂದ್ರ ಸಿಂಗ್ ಧೋನಿ: 6 (144 ಇನಿಂಗ್ಸ್)
ವೃದ್ಧಿಮಾನ್ ಸಹಾ: 3 (54 ಇನಿಂಗ್ಸ್)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.