ಹೈದರಾಬಾದ್: ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ರವೀಂದ್ರ ಜಡೇಜ ಅವರ ಅರ್ಧಶತಕಗಳ ಬಲದಿಂದ ಭಾರತ ತಂಡವು ಇಂಗ್ಲೆಂಡ್ ಎದುರಿನ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಮೊದಲ ಇನಿಂಗ್ಸ್ನಲ್ಲಿ 190ರನ್ಗಳ ಮುನ್ನಡೆ ಸಾಧಿಸಿದೆ.
ಉಪ್ಪಳದ ರಾಜೀವಗಾಂಧಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ ಭಾರತ ತಂಡವು 190 ರನ್ಗಳ ಮುನ್ನಡೆ ಸಾಧಿಸಿದೆ.
ಇಂಗ್ಲೆಂಡ್ ತಂಡವು ಗಳಿಸಿದ್ದ 246 ರನ್ಗಳಿಗೆ ಉತ್ತರವಾಗಿ ಆತಿಥೇಯ ತಂಡವು 121 ಓವರ್ಗಳಲ್ಲಿ 10 ವಿಕೆಟ್ಗಳಿಗೆ 436 ರನ್ ಗಳಿಸಿದೆ. ಜಡೇಜ 87 ಮತ್ತು ಅಕ್ಷರ್ ಪಟೇಲ್ 44 ರನ್ಗಳಿಸಿ ಮಿಂಚಿದರು. ಜೋ ರೂಟ್ ಅವರು 4 ವಿಕೆಟ್ ಪಡೆದು ಗಮನ ಸೆಳೆದರು.
ಇದೀಗ ಇಂಗ್ಲೆಂಡ್ ತಂಡ ಎರಡನೇ ಇನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.
ಇಂಗ್ಲೆಂಡ್ ಮೊದಲ ಇನಿಂಗ್ಸ್: 64.3 ಓವರ್ಗಳಲ್ಲಿ 246.
ಭಾರತ ಮೊದಲ ಇನಿಂಗ್ಸ್: 121 ಓವರ್ಗಳಲ್ಲಿ 10 ವಿಕೆಟ್ಗೆ 436
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.