ಜೈಪುರ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತದ ಗೆಲುವಿಗೆ 165 ರನ್‌ಗಳ ಅಗತ್ಯವಿದೆ.
ಇಲ್ಲಿನ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ನ್ಯೂಜಿಲೆಂಡ್ ತಂಡವು, ಮಾರ್ಟಿನ್ ಗಪ್ಟಿಲ್ (70) ಹಾಗೂ ಮಾರ್ಕ್ ಚಾಪ್‌ಮನ್ (63) ಆಕರ್ಷಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ.
ಕಿವೀಸ್ ಆರಂಭ ಉತ್ತಮವಾಗಿರಲಿಲ್ಲ. ಇನ್ನಿಂಗ್ಸ್‌ನ ಪ್ರಥಮ ಓವರ್‌ನಲ್ಲೇ ಡೆರಿಲ್ ಮಿಚೆಲ್ (0) ಅವರನ್ನು ಬಲಗೈ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಹೊರದಬ್ಬಿದರು.
ಈ ಹಂತದಲ್ಲಿ ಜೊತೆಗೂಡಿದ ಗಪ್ಟಿಲ್ ಹಾಗೂ ಚಾಪ್‌ಮನ್ ದ್ವಿತೀಯ ವಿಕೆಟ್‌ಗೆ ಶತಕದ (109) ಜೊತೆಯಾಟ ಕಟ್ಟಿದರು. ಈ ಮೂಲಕ ಸವಾಲಿನ ಮೊತ್ತ ಪೇರಿಸಲು ನೆರವಾದರು.
42 ಎಸೆತಗಳನ್ನು ಎದುರಿಸಿದ ಗಪ್ಟಿಲ್ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 70 ರನ್ ಗಳಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ಚಾಪ್‌ಮನ್ 50 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 63 ರನ್ ಗಳಿಸಿದರು.
ಇನ್ನುಳಿದಂದೆ ಟಿಮ್ ಸೀಫರ್ಟ್ (12), ಗ್ಲೆನ್ ಫಿಲಿಪ್ಸ್ (0), ರಚಿನ್ ರವೀಂದ್ರ (7), ಮಿಚೆಲ್ ಸ್ಯಾಂಟ್ನರ್ (4*) ರನ್ ಗಳಿಸಿದರು. ಭಾರತದ ಪರ ಆರ್. ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಎರಡು ಮತ್ತು ದೀಪಕ್ ಚಾಹರ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟನ್ನು ಹಂಚಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.