ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಪೆವಿಲಿಯನ್ ಪರೇಡ್ ನಡೆಸಿದ್ದಾರೆ.
ಅಲ್ಲದೆ 31.2 ಓವರ್‌ಗಳಲ್ಲಿ 46 ರನ್ನಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದಿಂದ ದಾಖಲಾದ ಮೂರನೇ ಕನಿಷ್ಠ ಮೊತ್ತವಾಗಿದೆ.
ಭಾರತದ ಈ ಕಳಪೆ ಸಾಧನೆಯು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಹೀಯಾಳಿಕೆಗೆ ಗುರಿಯಾಗಿದೆ.
ಟೆಸ್ಟ್ ಕ್ರಿಕೆಟ್‌ನಲ್ಲೂ ಟೀಮ್ ಇಂಡಿಯಾ ಆಕ್ರಮಣಶೀಲ ಶೈಲಿಯಲ್ಲಿ ಆಡಲಿದೆ ಎಂದು ಹೇಳಿರುವ ಕೋಚ್ ಗೌತಮ್ ಗಂಭೀರ್ ಅವರ ವಿರುದ್ಧ ಮೀಮ್ಸ್ ಹರಿದಾಡುತ್ತಿದೆ.
ಗಂಭೀರ್ ಅಡಿಯಲ್ಲಿ ಟೀಮ್ ಇಂಡಿಯಾ ಕೇವಲ 46 ರನ್ನಿಗೆ ಆಲೌಟ್ ಆಗಿದೆ. ಆ ಮೂಲಕ ಆರ್‌ಸಿಬಿ ದಾಖಲೆಯನ್ನು ಮುರಿದಿದೆ ಎಂದು ಉಲ್ಲೇಖಿಸಲಾಗಿದೆ.
2017ರ ಐಪಿಎಲ್‌ನಲ್ಲಿ ಈಡೆನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 49 ರನ್ನಿಗೆ ಆಲೌಟ್ ಆಗಿತ್ತು. ಆದರೆ ಈಗ ಟೀಮ್ ಇಂಡಿಯಾ 46 ರನ್ನಿಗೆ ಸರ್ವಪತನವನ್ನು ಕಂಡಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಅಗ್ರಸ್ಥಾನದಲ್ಲಿರುವ ಟೀಮ್ ಇಂಡಿಯಾದ ಕಳಪೆ ಸಾಧನೆಯನ್ನು ಅಭಿಮಾನಿಗಳು ಟೀಕಿಸಿದ್ದಾರೆ. ತವರಿನ ನೆಲದಲ್ಲಿ ಕೆಟ್ಟ ಪ್ರದರ್ಶನ ನೀಡಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಇತ್ತಷ್ಟು ಟ್ರೋಲ್‌ಗಳನ್ನು ಇಲ್ಲಿ ನೀಡಲಾಗಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.