ADVERTISEMENT

Ind vs NZ | ಮೊದಲ ಇನಿಂಗ್ಸ್‌ನಲ್ಲಿ ಭಾರತಕ್ಕೆ ಅಲ್ಪ ಮುನ್ನಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2024, 6:19 IST
Last Updated 2 ನವೆಂಬರ್ 2024, 6:19 IST
<div class="paragraphs"><p>ರಿಷಭ್ ಪಂತ್ ಹಾಗೂ ಶುಭಮನ್ ಗಿಲ್</p></div>

ರಿಷಭ್ ಪಂತ್ ಹಾಗೂ ಶುಭಮನ್ ಗಿಲ್

   

- ಪಿಟಿಐ ಚಿತ್ರ

ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭಾರತ 263 ರನ್‌ಗಳಿಗೆ ಆಲೌಟ್ ಆಗಿದೆ. ಆ ಮೂಲಕ 28 ರನ್‌ಗಳ ಮುನ್ನಡೆ ಪಡೆದಿದೆ.

ADVERTISEMENT

ಶುಭಮನ್ ಗಿಲ್ (90), ರಿಷಭ್ ಪಂತ್‌ (60), ವಾಷಿಂಗ್ಟನ್ ಸುಂದರ್ (ಅಜೇಯ 38) ಭಾರತದ ಪರ ಹೆಚ್ಚು ರನ್‌ ಗಳಿಸಿದರು.

ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂದು 86 ರನ್‌ ಗಳಿಸಿದ್ದ ಭಾರತಕ್ಕೆ ಇಂದಿನ ಮೊದಲ ಸೆಷನ್‌ನಲ್ಲಿ ಶುಭಮನ್ ಗಿಲ್ ಮತ್ತು ರಿಷಭ್ ಪಂತ್ ಆಸರೆಯಾದರು. ಇಬ್ಬರೂ ಅರ್ಧಶತಕ ಗಳಿಸಿ ಸಂಭ್ರಮಿಸಿದರು.

ನ್ಯೂಜಿಲೆಂಡ್ ಪರ ಅಜಾಜ್ ಪಟೇಲ್ 5 ವಿಕೆಟ್ ಕಿತ್ತರು

ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ 235 ರನ್‌ ಗಳಿಸಿ ಆಲೌಟ್ ಆಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.