ADVERTISEMENT

Mumbai Test: ಬಲಗೈ ವೇಗಿ ಜಸ್‌ಪ್ರೀತ್ ಬೂಮ್ರಾಗೆ ವಿಶ್ರಾಂತಿ ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಅಕ್ಟೋಬರ್ 2024, 10:50 IST
Last Updated 31 ಅಕ್ಟೋಬರ್ 2024, 10:50 IST
<div class="paragraphs"><p>ಜಸ್‌ಪ್ರೀತ್ ಬೂಮ್ರಾ</p></div>

ಜಸ್‌ಪ್ರೀತ್ ಬೂಮ್ರಾ

   

(ಪಿಟಿಐ ಚಿತ್ರ)

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಾಳೆ (ಶುಕ್ರವಾರ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

ADVERTISEMENT

ಈ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಬೂಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್‌ಗೆ ತಲುಪುವ ನಿಟ್ಟಿನಲ್ಲಿ ಮುಂಬರುವ ಪ್ರತಿಯೊಂದು ಪಂದ್ಯವೂ ಭಾರತದ ಪಾಲಿಗೆ ನಿರ್ಣಾಯಕವೆನಿಸಿದೆ. ಇದರಿಂದಾಗಿ ಬೂಮ್ರಾಗೆ ಅಗತ್ಯ ಬಿಡುವು ನೀಡುವ ಕುರಿತು ತಂಡದ ಪರಿಗಣನೆಯಲ್ಲಿದೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ 0-2ರ ಅಂತರದ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ. ಈಗ ಕ್ಲೀನ್-ಸ್ವೀಪ್ ತಪ್ಪಿಸಿಕೊಳ್ಳಲು ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಡಬ್ಲ್ಯುಟಿಸಿ ಫೈನಲ್‌ಗೆ ತಲುಪಲು ಉಳಿದಿರುವ ಆರು ಪಂದ್ಯಗಳ ಪೈಕಿ ಕನಿಷ್ಠ ನಾಲ್ಕರಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ನಿಟ್ಟಿನಲ್ಲಿ ಮುಂಬೈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಮುಂಬೈಯಲ್ಲೂ ಸ್ಪಿನ್ ಸ್ನೇಹಿ ಪಿಚ್ ನಿರ್ಮಾಣವಾಗುವ ಸಾಧ್ಯತೆಯಿದೆ.

ನ್ಯೂಜಿಲೆಂಡ್ ಸರಣಿಯ ಬಳಿಕ ಆಸ್ಟ್ರೇಲಿಯಾ ಪ್ರವಾಸ ತೆರಳಲಿರುವ ಟೀಮ್ ಇಂಡಿಯಾ, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.