ADVERTISEMENT

IND vs NZ T20: ಭಾರತ ವಿರುದ್ಧ ಟಾಸ್‌ ಗೆದ್ದ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜನವರಿ 2023, 13:44 IST
Last Updated 29 ಜನವರಿ 2023, 13:44 IST
ಟ್ರೋಫಿಯೊಂದಿಗೆ ಹಾರ್ದಿಕ್ ಪಾಂಡ್ಯ ಮತ್ತು ಮಿಚೆಲ್ ಸ್ಯಾಂಟನರ್
ಟ್ರೋಫಿಯೊಂದಿಗೆ ಹಾರ್ದಿಕ್ ಪಾಂಡ್ಯ ಮತ್ತು ಮಿಚೆಲ್ ಸ್ಯಾಂಟನರ್   

ಲಖನೌ: ಭಾರತ ವಿರುದ್ಧದ ಎರಡನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ನ್ಯೂಜಿಲೆಂಡ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡವು ನ್ಯೂಜಿಲೆಂಡ್ ಎದುರಿನ ಚುಟುಕು ಕ್ರಿಕೆಟ್ ಸರಣಿ ಜಯಿಸುವ ಗುರಿ ಈಡೇರಬೇಕಾದರೆ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ಈಗ 1–0ಯ ಮುನ್ನಡೆಯಲ್ಲಿದೆ. ರಾಂಚಿಯಲ್ಲಿ ಶುಕ್ರವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ಆತಿಥೇಯ ತಂಡವು 21 ರನ್‌ಗಳಿಂದ ಸೋತಿತ್ತು.

ADVERTISEMENT

ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಪಿಚ್ ಕೂಡ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುವ ನಿರೀಕ್ಷೆ ಇದೆ.

ತಂಡಗಳು
ಭಾರತ:
ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಶಿವಂ ಮಾವಿ, ಆರ್ಷದೀಪ್ ಸಿಂಗ್

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟನರ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ (ವಿಕೆಟ್‌ ಕೀಪರ್), ಡೆರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಈಶ್ ಸೋಧಿ, ಜೇಕಬ್ ಡಫಿ, ಲಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.