ADVERTISEMENT

IND vs NZ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೈಲಿಗಲ್ಲು ಸನಿಹದಲ್ಲಿ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಅಕ್ಟೋಬರ್ 2024, 10:30 IST
Last Updated 15 ಅಕ್ಟೋಬರ್ 2024, 10:30 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ಪಿಟಿಐ ಚಿತ್ರ)

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಮಗದೊಂದು ಮೈಲಿಗಲ್ಲಿನ ಸನಿಹದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 9,000 ರನ್‌ಗಳ ಮೈಲಿಗಲ್ಲು ತಲುಪಲು ಅವರಿಗೆ ಕೇವಲ 53 ರನ್‌ಗಳ ಅಗತ್ಯವಿದೆ.

ADVERTISEMENT

ಆ ಮೂಲಕ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಾಳೆಯಿಂದ (ಬುಧವಾರ) ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್, ಈ ಸ್ಮರಣೀಯ ಸಾಧನೆ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಸಚಿನ್ ತೆಂಡೂಲ್ಕರ್ 15,921, ರಾಹುಲ್ ದ್ರಾವಿಡ್ 13,265, ಸುನಿಲ್ ಗವಾಸ್ಕರ್ 10,122 ಮತ್ತು ಮತ್ತು ವಿರಾಟ್ ಕೊಹ್ಲಿ 8,947 ರನ್ ಗಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಒಂದೇ ಒಂದೂ ಅರ್ಧಶತಕವನ್ನು ಗಳಿಸದ ವಿರಾಟ್...

ಸದ್ಯ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ಲಯದಿಂದ ಬಳಲುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಆಡಿರುವ ಆರು ಇನಿಂಗ್ಸ್‌ಗಳಲ್ಲಿ ಒಂದು ಅರ್ಧ ಶತಕವನ್ನೂ ಗಳಿಸಲು ಸಾಧ್ಯವಾಗಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧ 46 ಹಾಗೂ ಬಾಂಗ್ಲಾದೇಶ ವಿರುದ್ಧ 47 ರನ್ ಗಳಿಸಿದ್ದರೂ ಅರ್ಧಶತಕ ಗಳಿಸಲು ಸಾಧ್ಯವಾಗಿರಲಿಲ್ಲ.

35 ವರ್ಷದ ವಿರಾಟ್ 2019ರಿಂದ 2023ರ ಅವಧಿಯಲ್ಲೂ ಹಿನ್ನಡೆ ಅನುಭವಿಸಿದ್ದರು.

ಕೋಚ್, ನಾಯಕ ಬೆಂಬಲ...

ಕೆಟ್ಟ ಬ್ಯಾಟಿಂಗ್ ಲಯದ ಹೊರತಾಗಿಯೂ ವಿರಾಟ್ ಕೊಹ್ಲಿ ಅವರನ್ನು ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ಬೆಂಬಲಿಸಿದ್ದಾರೆ.

'ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಪದಾರ್ಪಣೆ ಮಾಡಿರುವ ಪಂದ್ಯ ನನಗೀಗಲೂ ನೆನಪಿದೆ. ರನ್‌ಗಾಗಿನ ಹಸಿವು ಅವರಲ್ಲಿ ಈಗಲೂ ಇದೆ. ಅವರೊಬ್ಬ ವಿಶ್ವದರ್ಜೆಯ ಕ್ರಿಕೆಟಿಗ' ಎಂದು ಗೌತಮ್ ಗಂಭೀರ್ ಗುಣಗಾನ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ವೃತ್ತಿಜೀವನ:

  • ಪಂದ್ಯ: 115

  • ಇನಿಂಗ್ಸ್: 195

  • ರನ್: 8,947

  • ಗರಿಷ್ಠ: 254*

  • ಸರಾಸರಿ: 48.89

  • ಶತಕ: 29

  • ಅರ್ಧಶತಕ: 30

  • ಕ್ಯಾಚ್: 113

ಮತ್ತೊಂದೆಡೆ 295 ಏಕದಿನಗಳಲ್ಲಿ ವಿರಾಟ್ ಕೊಹ್ಲಿ, 58.18ರ ಸರಾಸರಿಯಲ್ಲಿ ಈವರೆಗೆ 13,906 ರನ್ ಪೇರಿಸಿದ್ದಾರೆ. 50 ಶತಕ ಹಾಗೂ 72 ಅರ್ಧಶತಕಗಳನ್ನು ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.