ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರು ಆರು ವಿಶ್ವಕಪ್ ಟೂರ್ನಿಯಲ್ಲಿ ಆಡಿದ ಮೊದಲ ಆಟಗಾರ್ತಿ ಎನಿಸಿಕೊಂಡರು.ಮೌಂಟ್ ಮಾಂಗನೂಯಿಯ ಓವಲ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.
ವಿಶ್ವ ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ (ಪುರುಷರ ಮತ್ತು ಮಹಿಳಾ ಕ್ರಿಕೆಟ್‌ನಲ್ಲಿ) ಮಿಥಾಲಿ ಹೊರತುಪಡಿಸಿ ಭಾರತದ ಸಚಿನ್ ತೆಂಡೂಲ್ಕರ್ ಮತ್ತು ಪಾಕಿಸ್ತಾನದ ಜಾವೇದ್ ಮಿಯಾಂದಾದ್ ಮಾತ್ರವೇ ಆರು ವಿಶ್ವಕಪ್ ಟೂರ್ನಿಗಳಲ್ಲಿ ಆಡಿದ್ದಾರೆ.
39 ವರ್ಷದ ಮಿಥಾಲಿ, 2000ರಲ್ಲಿ ಮೊದಲ ಸಲ ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದರು. ಅದಾದ ಬಳಿಕ 2005, 2009, 2013, 2017 ಹಾಗೂ ಇದೀಗ 2022ರ ಟೂರ್ನಿಯಲ್ಲಿ ಆಡುತ್ತಿದ್ದಾರೆ.
ಭಾರತ ಪರ ಇದುವರೆಗೆ226 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಿಥಾಲಿ7,632 ರನ್ ಗಳಿಸಿದ್ದಾರೆ. 7 ಶತಕಗಳು ಅವರ ಹೆಸರಿನಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.