ಕೇಪ್‌ಟೌನ್: ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಪರ್ಲ್‌ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಟೀಮ್ ಇಂಡಿಯಾ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ.
ಈ ಮೊದಲು ನಡೆದ ಟೆಸ್ಟ್ ಸರಣಿಯಲ್ಲೂ ಸೋಲಿಗೆ ಶರಣಾಗಿತ್ತು.
ನಾಲ್ವರಿಗೆ ಕೊಕ್...
ಭಾರತ ತಂಡದಲ್ಲಿ ಪ್ರಮುಖವಾಗಿಯೂ ನಾಲ್ಕು ಬದಲಾವಣೆಗಳನ್ನು ತರಲಾಗಿದೆ. ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವೆಂಕಟೇಶ್ ಅಯ್ಯರ್ ಹಾಗೂ ಭುವನೇಶ್ವರ್ ಕುಮಾರ್ ಅವರನ್ನು ಕೈಬಿಡಲಾಗಿದೆ.
ಇವರ ಸ್ಥಾನಗಳಲ್ಲಿ ಸೂರ್ಯಕುಮಾರ್ ಯಾದವ್, ಜಯಂತ್ ಯಾದವ್, ದೀಪಕ್ ಚಾಹರ್ ಹಾಗೂ ಕನ್ನಡಿಗ ಪ್ರಸಿದ್ಧ ಕೃಷ್ಣ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಪೈಕಿ ಶಾರ್ದೂಲ್ ಅವರನ್ನು ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.
ಭಾರತ ಪ್ಲೇಯಿಂಗ್ ಇಲೆವೆನ್ ಇಂತಿದೆ:
ಕೆ.ಎಲ್. ರಾಹುಲ್ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಜಯಂತ್ ಯಾದವ್, ಪ್ರಸಿದ್ಧ ಕೃಷ್ಣ, ದೀಪಕ್ ಚಹರ್, ಜಸ್‌ಪ್ರೀತ್ ಬೂಮ್ರಾ ಮತ್ತು ಯುಜುವೇಂದ್ರ ಚಾಹಲ್.
ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್ ಇಂತಿದೆ:
ತೆಂಬ ಬಾವುಮಾ (ನಾಯಕ), ಜಾನೆಮನ್ ಮಲಾನ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಏಡನ್ ಮಾರ್ಕರಮ್, ರಸಿ ವ್ಯಾನ್ ಡರ್ ಡಸೆನ್, ಡೇವಿಡ್ ಮಿಲ್ಲರ್, ಆ್ಯಂಡಿಲೆ ಪಿಶುವಾಯೊ, ಕೇಶವ್ ಮಹಾರಾಜ್, ಡ್ವೇನ್ ಪ್ರೆಟೊರಿಯಸ್, ಲುಂಗಿ ಗಿಡಿ ಮತ್ತು ಸಿಸಾಂದ ಮಗಾಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.