ಸೆಂಚುರಿಯನ್: 146 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ.
ಈ ಕುರಿತು 'ಎನ್‌ಡಿಟಿವಿ' ವರದಿ ಮಾಡಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಇನಿಂಗ್ಸ್ ಹಾಗೂ 32 ರನ್ ಅಂತರದಿಂದ ಸೋತಿರಬಹುದು.
ಆದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಏಳು ಕ್ಯಾಲೆಂಡರ್ ವರ್ಷಗಳಲ್ಲಿ 2,000ಕ್ಕೂ ಹೆಚ್ಚು ರನ್ ಗಳಿಸಿದ ವಿಶಿಷ್ಟ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ.
ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕಾರ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ (76) ಏಕಾಂಗಿ ಹೋರಾಟ ನೀಡಿದ್ದರು.
ಕ್ಯಾಲೆಂಡರ್ ವರ್ಷದಲ್ಲಿ ವಿರಾಟ್ ಕೊಹ್ಲಿ 2,000ಕ್ಕೂ ಹೆಚ್ಚು ರನ್ ಸಾಧನೆ:
2012: 2,186
2014: 2,286
2016: 2,595
2017: 2,818
2018: 2,735
2019: 2,455
2023: 2,048*
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.