ರೊಸೆಯು, ಡಾಮ್ನಿಕಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ ಆರ್.ಅಶ್ವಿನ್, ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್ಸನ್ ಅವರ ದಾಖಲೆ ಮುರಿದಿದ್ದಾರೆ.
ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನದಲ್ಲಿರುವ ಅಶ್ವಿನ್ ಈವರೆಗೆ ಒಟ್ಟು 33 ಬಾರಿ ಇನಿಂಗ್ಸ್‌ವೊಂದರಲ್ಲಿ 5 ವಿಕೆಟ್ ಗೊಂಚಲು ಸಾಧನೆ ಮಾಡಿದ್ದಾರೆ. ಆ ಮೂಲಕ ಹೆಚ್ಚು ಸಲ ಒಂದೇ ಇನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.
32 ಸಲ ಈ ಸಾಧನೆ ಮಾಡಿರುವ ಇಂಗ್ಲೆಂಡ್ ವೇಗಿ ಜೇಮ್ಸ್ ಆ್ಯಂಡರ್‌ಸನ್ ಇದೀಗ 7ನೇ ಸ್ಥಾನಕ್ಕೆ ಜಾರಿದ್ದಾರೆ.
ಭಾರತದ ಹಿಡಿತದಲ್ಲಿ ಪಂದ್ಯ
ಭಾರತ ಹಾಗೂ ವೆಸ್ಟ್ ಇಂಡೀಸ್ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಿವೆ.
ಡಾಮ್ನಿಕಾದಲ್ಲಿ ಬುಧವಾರ ಆರಂಭವಾದ ಮೊದಲ ಪಂದ್ಯದಲ್ಲಿ ಆರ್.ಅಶ್ವಿನ್ ಮತ್ತು ರವೀಂದ್ರ ಜಡೇಜ ಎದುರಾಳಿ ಬ್ಯಾಟರ್‌ಗಳಿಗೆ ಕಾಟ ಕೊಟ್ಟರು. ಇವರಿಬ್ಬರು ಕ್ರಮವಾಗಿ ಐದು ಮತ್ತು ಮೂರು ವಿಕೆಟ್ ಉರುಳಿಸಿದರು. ತಲಾ ಒಂದೊಂದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಸಹ ಭಾರತ ತಂಡ ಮೇಲುಗೈ ಸಾಧಿಸಲು ನೆರವಾದರು.
ಭಾರತ ಬೌಲಿಂಗ್ ಎದುರು ತಿಣುಕಾಡಿದ ಆತಿಥೇಯ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 64.3 ಓವರ್‌ಗಳಲ್ಲಿ 150 ರನ್‌ಗಳಿಗೆ ಅಲೌಟ್ ಆಗಿದೆ.
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿರುವ ಭಾರತ ವಿಕೆಟ್ ನಷ್ಟವಿಲ್ಲದೆ 80 ರನ್ ಗಳಿಸಿದೆ. ಪದಾರ್ಪಣೆ ಪಂದ್ಯ ಆಡುತ್ತಿರುವ ಯಶಸ್ವಿ ಜೈಸ್ವಾಲ್ (40) ಮತ್ತು ನಾಯಕ ರೋಹಿತ್ ಶರ್ಮ (30) ಕ್ರೀಸ್‌ನಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.