ಅಹಮದಾಬಾದ್: ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್‌ನ ಉಸ್ತುವಾರಿ ನಾಯಕ ನಿಕೋಲಸ್ ಪೂರನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಇಶಾನ್ ಕಿಶನ್ ಸ್ಥಾನಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಸ್ಥಾನ ಪಡೆದಿದ್ದಾರೆ.
ಅತ್ತ ಗಾಯದ ಸಮಸ್ಯೆಗೆ ಒಳಗಾಗಿರುವ ಕೀರನ್ ಪೊಲಾರ್ಡ್ ಸೇವೆಯಿಂದ ವಿಂಡೀಸ್ ವಂಚಿತವಾಗಿದೆ.
ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಭಾರತ 1-0 ಅಂತರದ ಮುನ್ನಡೆ ದಾಖಲಿಸಿದೆ. ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಇರಾದೆಯಲ್ಲಿದೆ.
ಪ್ಲೇಯಿಂಗ್ ಇಲೆವೆನ್ ಇಂತಿದೆ:
ಭಾರತ: ರೋಹಿತ್ ಶರ್ಮಾ (ನಾಯಕ). ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ಯಜುವೇಂದ್ರ ಚಾಹಲ್.
ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ವಿಕೆಟ್ ಕೀಪರ್), ಬ್ರಂಡನ್ ಕಿಂಗ್, ಶಾಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಒಡಿಯನ್ ಸ್ಮಿತ್, ಅಕೀಲ್ ಹುಸೇನ್, ಫ್ಯಾಬಿಯನ್ ಅಲೆನ್, ಅಲ್ಜರಿ ಜೋಸೆಫ್ ಮತ್ತು ಕೆಮರ್ ರೋಚ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.