ಹುಬ್ಬಳ್ಳಿ: ಭಾರತ ‘ಎ’ ಹಾಗೂ ನ್ಯೂಜಿಲೆಂಡ್ ’ಎ‘ ತಂಡಗಳ ನಡುವಣ ನಾಲ್ಕು ದಿನಗಳ ‘ಟೆಸ್ಟ್’ ಪಂದ್ಯ ಶುಕ್ರವಾರ ಆರಂಭಗೊಂಡಿತು.
ಬೆಳಿಗ್ಗೆ 10.10ಕ್ಕೆ ಟಾಸ್ ಹಾಕಲಾಯಿತು. ಸಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಾಮ್ ಬ್ರೂಸ್, ಫೀಲ್ಡಿಂಗ್ ಆಯ್ದುಕೊಂಡರು.
ಭಾರತ ’ಎ‘ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ ಹಾಗೂ ಅಭಿಮನ್ಯು ಈಶ್ವರನ್ ಬ್ಯಾಟಿಂಗ್ ನಡೆಸುತ್ತಿದ್ದಾರೆ.
ಕಿವೀಸ್ ತಂಡದ ಜಾಕೊಬ್ ಡಫಿ ಮೊದಲ ಓವರ್ ಬೌಲಿಂಗ್ ಮಾಡಿದರು.
ಬೆಳಿಗ್ಗೆ 9.30ಕ್ಕೆ ಶುರುವಾಗಬೇಕಿದ್ದ ಪಂದ್ಯವು ಕ್ರೀಡಾಂಗಣದಲ್ಲಿ ತೇವಾಂಶ ಹೆಚ್ಚಿದ್ದ ಕಾರಣ ಬೆಳಿಗ್ಗೆ 10.30ಕ್ಕೆ ಆರಂಭಗೊಂಡಿತು.
ಕರ್ನಾಟಕದ ಆಟಗಾರ ಪ್ರಸಿದ್ಧ ಕೃಷ್ಣ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಮಹಾರಾಷ್ಟ್ರದ ಆಟಗಾರ ಶಾರ್ದೂಲ್ ಠಾಕೂರ್, ಅಂತಿಮ 11ರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗುರುವಾರ ಆರಂಭವಾಗಿದ್ದ ಪಂದ್ಯದ ಮೊದಲ ದಿನದಾಟವು ಕ್ರೀಡಾಂಗಣದ ತೇವ ಆರದ ಕಾರಣ ರದ್ದುಗೊಳಿಸಲಾಗಿತ್ತು.
ಮೂರು ’ಟೆಸ್ಟ್‘ಗಳ ಸರಣಿಯ ಮೊದಲ ಪಂದ್ಯವು ಬೆಂಗಳೂರಿನಲ್ಲಿ ನಡೆದಿತ್ತು. ಸಾಕಷ್ಟು ರನ್‌ಗಳ ಹೊಳೆ ಹರಿದರೂ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.