ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಿಗದಿತ ವೇಳೆಯೊಳಗೆ ಓವರ್‌ಗಳನ್ನು ಮುಗಿಸದ ಕಾರಣಕ್ಕೆ ಭಾರತ ತಂಡಕ್ಕೆ ದಂಡ ವಿಧಿಸಲಾಗಿದೆ. ಸ್ಲೋ ಓವರ್‌ರೇಟ್ ಪರಿಣಾಮ ಪಂದ್ಯ ಶುಲ್ಕದ ಶೇ 10ರಷ್ಟು ದಂಡದ ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (ಡಬ್ಲ್ಯುಟಿಸಿ) ಎರಡು ಅಂಕ ಕಳೆದುಕೊಂಡಿದೆ.
ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಇನಿಂಗ್ಸ್ ಹಾಗೂ 32 ರನ್ ಅಂತರದ ಸೋಲಿಗೆ ಶರಣಾಗಿತ್ತು.
ಭಾರತ ತಂಡದ ಆಟಗಾರರು ಈ ಪಂದ್ಯದ ಶುಲ್ಕದ ಶೇ 10ರಷ್ಟನ್ನು ದಂಡವಾಗಿ ನೀಡಬೇಕಿದೆ. ಅಲ್ಲದೇ ಭಾರತ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ (ಡಬ್ಲ್ಯುಟಿಸಿ) ಎರಡು ಪಾಯಿಂಟ್‌ಗಳನ್ನು ಕಡಿತ ಮಾಡಿದೆ.
ಐಸಿಸಿ ಪಂದ್ಯ ರೆಫರಿಗಳ ಎಲೈಟ್ ಪ್ಯಾನೆಲ್‌ನ ಕ್ರಿಸ್ ಬ್ರಾಡ್ ಅವರು ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ದಂಡ ಪಾವತಿಸಲು ಸಮ್ಮತಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಅಂಕಪಟ್ಟಿಯಲ್ಲಿ ಭಾರತ ಆರನೇ ಸ್ಥಾನಕ್ಕೆ ಕುಸಿದಿದೆ. 38.89ರ ಜಯದ ಶೇಕಡಾವಾರು ಹೊಂದಿದೆ. ಮತ್ತೊಂದೆಡೆ ಮೊದಲ ಸರಣಿ ಆಡುತ್ತಿರುವ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಅಂಕಪಟ್ಟಿ ಇಂತಿದೆ:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.