ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತನ್ನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ಮೊತ್ತವನ್ನು ಕಲೆ ಹಾಕಿದೆ. ಇದು ಟಿ20 ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗಳಿಸಿದ ಗರಿಷ್ಠ ಮೊತ್ತವಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಭಾರತದ ಹಿಂದಿನ ಗರಿಷ್ಠ ಟಿ20 ಮೊತ್ತವು ಅಕ್ಟೋಬರ್ 10, 2013 ರಂದು ದಾಖಲಾಗಿತ್ತು. ಆ ಪಂದ್ಯದಲ್ಲಿ ಭಾರತ 19.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟದೊಂದಿಗೆ 202ರನ್ ದಾಖಲಿಸಿತ್ತು. ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದೊಂದಿಗೆ 201ರನ್ ಗಳಿಸಿತ್ತು. ಭಾರತ ಅದನ್ನು ಯಶಸ್ವಿಯಾಗಿ ಚೇಸ್ ಮಾಡಿ ಗೆದ್ದು ಬೀಗಿತ್ತು.
ರಾಜ್‌ಕೋಟ್‌ನಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ಯುವರಾಜ್ ಸಿಂಗ್ 35 ಎಸೆತಗಳಿಂದ 77 ರನ್ ಗಳಿಸಿದ್ದರು.
ಆಸ್ಟ್ರೇಲಿಯ ವಿರುದ್ಧದ ಟಿ20ಯಲ್ಲಿ ಭಾರತ 200 ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತವನ್ನು ಒಟ್ಟುಗೂಡಿಸಿದ್ದು ಇದು ಮೂರನೇ ಬಾರಿ.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.