ಬೆಂಗಳೂರು: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ, ಏಕದಿನ, ಟ್ವೆಂಟಿ-20 ಹಾಗೂ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ಸೇರಿರುವ ಬಿಸಿಸಿಐ ಆಯ್ಕೆ ಸಮಿತಿಯು ಎಲ್ಲ ಮೂರು ಮಾದರಿಯ ತಂಡಗಳನ್ನು ಪ್ರಕಟಿಸಿವೆ.
ಏಕದಿನ ಹಾಗೂ ಟ್ವೆಂಟಿ-20 ಸರಣಿಗಳಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ರೋಹಿತ್ ಹಾಗೂ ಕೊಹ್ಲಿ ವಿಶ್ರಾಂತಿ ಬಯಸಿದ್ದರು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ರೋಹಿತ್ ಹಾಗೂ ಕೊಹ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಏಕದಿನದಲ್ಲಿ ಕೆ.ಎಲ್ ರಾಹುಲ್ ಮತ್ತು ಟ್ವೆಂಟಿ-20 ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ, ತಲಾ ಮೂರು ಏಕದಿನ ಹಾಗೂ ಟ್ವೆಂಟಿ-20 ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಭಾಗವಹಿಸಲಿದೆ.
ಏಕದಿನ ತಂಡ ಇಂತಿದೆ:
ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟೀದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಕೇಶ್ ಕುಮಾರ್, ಆವೇಶ್ ಖಾನ್, ಅರ್ಶದೀಪ್ ಸಿಂಗ್ ಮತ್ತು ದೀಪಕ್ ಚಾಹರ್
ಟ್ವೆಂಟಿ-20 ತಂಡ ಇಂತಿದೆ:
ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಕಶೇ ಕುಮಾರ್ ಮತ್ತು ದೀಪಕ್ ಚಾಹರ್.
ಟೆಸ್ಟ್ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ (ಉಪನಾಯಕ), ಪ್ರಸಿದ್ಧ ಕೃಷ್ಣ,
*ಮೊಹಮ್ಮದ್ ಶಮಿ ಸಂಪೂರ್ಣ ದೈಹಿಕ ಸಾಮರ್ಥ್ಯ ಮರಳಿ ಪಡೆದ್ದಲ್ಲಿ ಮಾತ್ರ ಲಭ್ಯವಾಗಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.