ಇಂದೋರ್: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಸಾರ್ವಕಾಲಿಕ ಶ್ರೇಷ್ಠ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೂರನೇ ಸ್ಥಾನಕ್ಕೇರಿದ್ದಾರೆ.
ಅಶ್ವಿನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈವರೆಗೆ ಒಟ್ಟು 689 ವಿಕೆಟ್ ಕಬಳಿಸಿದ್ದಾರೆ.
ಈ ಮೂಲಕ ಮಾಜಿ ನಾಯಕ ಕಪಿಲ್ ದೇವ್ (687) ದಾಖಲೆಯನ್ನು ಮುರಿದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ನಲ್ಲಿ ಅಶ್ವಿನ್ ಮೂರು ವಿಕೆಟ್ ಗಳಿಸಿದರು.
ಮಾಜಿ ದಿಗ್ಗಜರಾದ ಅನಿಲ್ ಕುಂಬ್ಳೆ (953) ಹಾಗೂ ಹರಭಜನ್ ಸಿಂಗ್ (707) ನಂತರದ ಸ್ಥಾನದಲ್ಲಿ ಅಶ್ವಿನ್ ಗುರುತಿಸಿಕೊಂಡಿದ್ದಾರೆ.
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್‌ಗಳು:
1. ಅನಿಲ್ ಕುಂಬ್ಳೆ: 953 (499 ಇನಿಂಗ್ಸ್)
2. ಹರಭಜನ್ ಸಿಂಗ್: 707 (442 ಇನಿಂಗ್ಸ್)
3. ಆರ್. ಅಶ್ವಿನ್: 689 (347 ಇನಿಂಗ್ಸ್)
4. ಕಪಿಲ್ ದೇವ್: 687 (356 ಇನಿಂಗ್ಸ್)
5. ಜಹೀರ್ ಖಾನ್: 597 (373 ಇನಿಂಗ್ಸ್)
ಟೆಸ್ಟ್‌ನಲ್ಲಿ 466 ವಿಕೆಟ್...
ಈ ಪೈಕಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅಶ್ವಿನ್ ಇದುವರೆಗೆ 466 ವಿಕೆಟ್ ಗಳಿಸಿದ್ದಾರೆ. ಭಾರತೀಯ ಬೌಲರ್‌ಗಳ ಪೈಕಿ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದು (619), ಕಪಿಲ್ ದೇವ್ (434) ಮೂರನೇ ಸ್ಥಾನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.