ADVERTISEMENT

IND vs BAN T20 | ಸಂಜು ಶತಕದ ಅಬ್ಬರ: ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್ ಜಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಅಕ್ಟೋಬರ್ 2024, 13:06 IST
Last Updated 12 ಅಕ್ಟೋಬರ್ 2024, 13:06 IST
<div class="paragraphs"><p>ಸಂಜು ಸ್ಯಾಮ್‌ಸನ್‌</p></div>

ಸಂಜು ಸ್ಯಾಮ್‌ಸನ್‌

   

ಹೈದರಾಬಾದ್: ಬಾಂಗ್ಲಾದೇಶ ತಂಡದ ವಿರುದ್ಧ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯದಲ್ಲಿ ಭಾರತ ತಂಡವು 133 ರನ್‌ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡವು ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್‌ ಬಲದಿಂದ 20 ಓವರ್‌ಗಳಲ್ಲಿ ವಿಕೆಟ್ ನಷ್ಟಕ್ಕೆ 297 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.

ADVERTISEMENT

298 ರನ್‌ಗಳ ಬೃಹತ್ ಮೊತ್ತ ಬೆನ್ನತ್ತಿದ ಬಾಂಗ್ಲಾ ತಂಡವು 20 ಓವರ್‌ಗಳಲ್ಲಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 164 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಇದರೊಂದಿಗೆ 3 ಪಂದ್ಯ ಟಿ20 ಸರಣಿಯನ್ನು ಟೀಮ್ ಇಂಡಿಯಾ 3–0 ಅಂತರಿಂದ ಕ್ಲೀನ್ ಸ್ವೀಪ್ ಮಾಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.