ADVERTISEMENT

IND vs NZ Test | ಮೊದಲ ಇನ್ನಿಂಗ್ಸ್‌: ಭಾರತ 46ಕ್ಕೆ ಆಲೌಟ್‌

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2024, 7:05 IST
Last Updated 17 ಅಕ್ಟೋಬರ್ 2024, 7:05 IST
<div class="paragraphs"><p>ಪಂತ್‌</p></div>

ಪಂತ್‌

   

ಬೆಂಗಳೂರು: ಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ–ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್‌ಗಳಿಗೆ ಆಲೌಟ್‌ ಆಯಿತು.

ಭೋಜನ ವಿರಾಮದ ವೇಳೆಗೆ ಭಾರತ ಕೇವಲ 23.5 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 34 ರನ್‌ಗಳಿಸಿತ್ತು. ಆದರೆ ವಿರಾಮದ ಬಳಿಕ 31.2 ಓವರ್‌ಗಳಲ್ಲಿ ಭಾರತ ಸರ್ವಪತನ ಕಂಡಿತು.

ADVERTISEMENT

ಮ್ಯಾಟ್ ಹೆನ್ರಿ ಹಾಗೂ ವಿಲಿಯಂ ಒ ರೂರ್ಕಿ ಮಾರಕ ದಾಳಿ ನಡೆಸಿ ಭಾರತವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದರು.

ಟಾಸ್‌ ಗೆದ್ದು ಭಾರತ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಮೊದಲು ಬೌಲಿಂಗ್‌ ಮಾಡಿದ ನ್ಯೂಜಿಲೆಂಡ್ ಭಾರತದ ಪ್ರಮುಖ ಬ್ಯಾಟರ್‌ಗಳ ಬೆನ್ನೆಲುಬು ಮುರಿಯಿತು.

ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸರ್ಫರಾಜ್ ಖಾನ್, ರವೀಂದ್ರ ಜಡೇಜ ಹಾಗೂ ಅಶ್ವಿನ್‌ ಶೂನ್ಯಕ್ಕೆ ಔಟಾದರು. ರೋಹಿತ್‌ ಶರ್ಮಾ 2, ಜೈಸ್ವಾಲ್ 13ಕ್ಕೆ ಔಟಾದರು. ಪಂತ್‌ 20 ರನ್‌ಗಳಿಸಿ ಔಟಾದರು. 

ನ್ಯೂಜಿಲೆಂಡ್ ಪರ ಟಿಮ್ ಸೌಥಿ 1, ವಿಲಿಯಂ ಒ ರೂರ್ಕಿ 4, ಮ್ಯಾಟ್ ಹೆನ್ರಿ 5 ವಿಕೆಟ್‌ ಪಡೆದು ಅಬ್ಬರಿಸಿದರು. 

ತಂಡಗಳು...

ಭಾರತ: ರೋಹಿತ್ ಶರ್ಮಾ (ನಾಯಕ), ಜಸ್‌ಪ್ರೀತ್ ಬೂಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್‌ಕೀಪರ್),  ಆರ್. ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್,

ನ್ಯೂಜಿಲೆಂಡ್: ಟಾಮ್ ಲೇಥಮ್ (ನಾಯಕ), ಡೆವೊನ್ ಕಾನ್ವೆ, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಾಮ್ ಬ್ಲಂಡೆಲ್ (ವಿಕೆಟ್‌ಕೀಪರ್), ಅಜಾಜ್ ಪಟೇಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ವಿಲಿಯಂ ಒ ರೂರ್ಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.