ADVERTISEMENT

IND vs NZ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯದ್ದೇ ಆಟ; ಮೊದಲ ದಿನದಾಟ ರದ್ದು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಅಕ್ಟೋಬರ್ 2024, 9:00 IST
Last Updated 16 ಅಕ್ಟೋಬರ್ 2024, 9:00 IST
<div class="paragraphs"><p>ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ</p></div>

ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ

   

(ಪ್ರಜಾವಾಣಿ ಚಿತ್ರ/ಎಸ್.ಕೆ.ದಿನೇಶ್)

ಬೆಂಗಳೂರು: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಸತತವಾಗಿ ಸುರಿದ ಮಳೆಯಿಂದಾಗಿ ಅಡಚಣೆಯಾಗಿದೆ. ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದಾಟ ರದ್ದುಗೊಂಡಿದೆ.

ADVERTISEMENT

ಇಂದು (ಬುಧವಾರ) ಬೆಳಿಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಯಾನಿಗಳಿಗೆ ನಿರಾಸೆಯಾಗಿದೆ.

ಸತತವಾಗಿ ಸುರಿದ ಮಳೆಯಿಂದಾಗಿ ಊಟದ ವಿರಾಮವನ್ನು ಬೇಗನೇ ತೆಗೆದುಕೊಳ್ಳಲಾಯಿತು. ಟೀ ವಿರಾಮದವರೆಗೂ ಪರಿಸ್ಥಿತಿ ಬದಲಾಗಲಿಲ್ಲ. ಬಳಿಕ ಮೋಡಕವಿದ ವಾತಾವಾರಣ ಹಾಗೂ ತುಂತುರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಿನದಾಟ ರದ್ದುಗೊಳಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ.

ಇದರಿಂದಾಗಿ ಟಾಸ್ ಕೂಡ ಕಾಣದೇ ಮೊದಲ ದಿನದಾಟ ಸಂಪೂರ್ಣವಾಗಿ ನಷ್ಟವಾಗಿದೆ.

ಬೆಂಗಳೂರಿನಲ್ಲಿ ಇನ್ನೂ ಎರಡು, ಮೂರು ದಿವಸ ಇದೇ ವಾತಾವರಣ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಚಿನ್ನಸ್ವಾಮಿ ಅಂಗಳದಲ್ಲಿ ಸಬ್‌ ಏರ್ ಸಿಸ್ಟಮ್ ಎಂಬ ಅತ್ಯಾಧುನಿಕ ವ್ಯವಸ್ಥೆ ಇದೆ. ಮಳೆ ಬಂದು ನಿಂತ ಅರ್ಧ ಗಂಟೆಯಲ್ಲಿ ಪಂದ್ಯವಾಡಲು ಮೈದಾನವನ್ನು ಸಿದ್ಧಗೊಳಿಸುವ ನುರಿತ ಸಿಬ್ಬಂದಿಯೂ ಇದ್ದಾರೆ. ಆದರೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಿನ್ನಡೆಯಾಗಿದೆ.

ನಾಳೆ (ಗುರುವಾರ) ಮಳೆಯಾಗದಿದ್ದರೆ ಹಾಗೂ ಶುಭ್ರವಾದ ವಾತಾವಾರಣ ಕಂಡುಬಂದರೆ ಬೆಳಿಗ್ಗೆ 8.45ಕ್ಕೆ ಟಾಸ್ ಗದಿಪಡಿಸಲಾಗಿದೆ. ಪಂದ್ಯ 9.15ಕ್ಕೆ ಆರಂಭವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.