ಸೆಂಚುರಿಯನ್: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಮೊದಲ ಇನಿಂಗ್ಸ್‌ನಲ್ಲಿ 408 ರನ್‌ಗಳಿಗೆ ಆಲೌಟ್ ಆಗಿದೆ.
ಆ ಮೂಲಕ ಮೊದಲ ಇನಿಂಗ್ಸ್‌ನಲ್ಲಿ 163 ರನ್‌ಗಳ ಮುನ್ನಡೆ ಗಳಿಸಿದೆ. ನಾಯಕ ತೆಂಬ ಬಾವುಮಾ ಬ್ಯಾಟಿಂಗ್ ಮಾಡಲಿಲ್ಲ.
ತಮ್ಮ ವೃತ್ತಿ ಜೀವನದ ಕೊನೆಯ ಟೆಸ್ಟ್ ಸರಣಿ ಆಡುತ್ತಿರುವ ಎಲ್ಗರ್ ದ್ವಿಶತಕ (185) ವಂಚಿತರಾಗಿದ್ದಾರೆ. ಎಲ್ಗರ್ 287 ಎಸೆತಗಳಲ್ಲಿ 185 ರನ್ ಗಳಿಸಿ (28 ಬೌಂಡರಿ) ಔಟ್ ಆದರು. ಬಳಿಕ ಗೇರಾಲ್ಡ್ ಕಾರ್ಟ್ಜಿ 19 ರನ್ ಗಳಿಸಿ ನಿರ್ಗಮಿಸಿದರು.
ಮೂರನೇ ದಿನದಾಟದ ಮೊದಲ ಅವಧಿಯಲ್ಲೂ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳನ್ನು ಕಾಡಿದರು.
ಡೀನ್ ಎಲ್ಗರ್ ಹಾಗೂ ಮಾರ್ಕೊ ಜಾನ್ಸೆನ್ ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾದರು. 84 ರನ್ ಗಳಿಸಿದ ಜಾನ್ಸೆನ್ ಅಜೇಯರಾಗುಳಿದರು.
ಭಾರತದ ಪರ ಜಸ್‌ಪ್ರೀತ್ ಬೂಮ್ರಾ ನಾಲ್ಕು ಹಾಗೂ ಮೊಹಮ್ಮದ್ ಸಿರಾಜ್ ಎರಡು ಮತ್ತು ಆರ್. ಅಶ್ವಿನ್, ಶಾರ್ದೂಲ್ ಠಾಕೂರ್ ಹಾಗೂ ಪ್ರಸಿದ್ಧ ಕೃಷ್ಣ ತಲಾ ಒಂದು ವಿಕೆಟ್ ಗಳಿಸಿದರು.
ರಾಹುಲ್ ಶತಕ...
ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 245 ರನ್ನಿಗೆ ಆಲೌಟ್ ಆಗಿತ್ತು. ಕೆ.ಎಲ್. ರಾಹುಲ್ ಅಮೋಘ ಶತಕ (101) ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ಪರ ಕಗಿಸೊ ರಬಾಡ ಐದು ಹಾಗೂ ಚೊಚ್ಚಲ ಪಂದ್ಯ ಆಡುತ್ತಿರುವ ನ್ಯಾಂಡ್ರೆ ಬರ್ಗರ್ ಮೂರು ವಿಕೆಟ್ ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.