ಸೆಂಚುರಿಯನ್: ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಗಿದೆ.
ಮೊದಲ ದಿನದ ಊಟದ ವಿರಾಮದ ವೇಳೆಗೆ 26 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿದೆ.
ಆರಂಭಿಕ ವೈಫಲ್ಯ ಕಂಡ ಭಾರತ ತಂಡಕ್ಕೆ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಆಸರೆಯಾಗಿದ್ದಾರೆ. ಕೊಹ್ಲಿ 33 ಹಾಗೂ ಅಯ್ಯರ್ 31 ರನ್ ಗಳಿಸಿ ಕ್ರೀಸಿನಲ್ಲಿದ್ದಾರೆ. ಇವರಿಬ್ಬರು ಮುರಿಯದ ನಾಲ್ಕನೇ ವಿಕೆಟ್‌ಗೆ 67 ರನ್ ಗಳಿಸಿದ್ದಾರೆ.
ರೋಹಿತ್, ಜೈಸ್ವಾಲ್, ಗಿಲ್ ವಿಕೆಟ್ ಪತನ...
24 ರನ್ ಗಳಿಸುವಷ್ಟರಲ್ಲಿ ಭಾರತ ತಂಡವು ಆರಂಭಿಕರಾದ ರೋಹಿತ್ ಶರ್ಮಾ (5), ಯಶಸ್ವಿ ಜೈಸ್ವಾಲ್ (17) ಹಾಗೂ ಶುಭಮನ್ ಗಿಲ್ (2) ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ದಕ್ಷಿಣ ಆಫ್ರಿಕಾ ಪರ ಚೊಚ್ಚಲ ಪಂದ್ಯ ಆಡುತ್ತಿರುವ ನ್ಯಾಂಡ್ರೆ ಬರ್ಗರ್ ಎರಡು ವಿಕೆಟ್ ಗಳಿಸಿ ಮಿಂಚಿದರು. ಇನ್ನೊಂದು ವಿಕೆಟ್ ಕಗಿಸೊ ರಬಾಡ ಪಡೆದರು.
ಟಾಸ್ ಗೆದ್ದ ದ.ಆಫ್ರಿಕಾ ಫೀಲ್ಡಿಂಗ್ ಆಯ್ಕೆ...
ಈ ಮೊದಲು ಟಾಸ್ ಗೆದ್ದ ದಕ್ಷಿಣ ಆಫ್ರಿಕಾದ ನಾಯಕ ತೆಂಬಾ ಬವುಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ.
ಪ್ರಸಿದ್ಧ ಕೃಷ್ಣ ಪದಾರ್ಪಣೆ...
ಭಾರತದ ಪರ ಕನ್ನಡಿಗ ಪ್ರಸಿದ್ಧ ಕೃಷ್ಣ ಪದಾರ್ಪಣೆ ಮಾಡಿದ್ದಾರೆ. ಈ ಪಂದ್ಯಕ್ಕೆ ಆಲ್‌ರೌಂಡರ್ ರವಿಂದ್ರ ಜಡೇಜ ಅಲಭ್ಯರಾಗಿದ್ದಾರೆ.
ಮತ್ತೊಂದೆಡೆ ದಕ್ಷಿಣ ಆಫ್ರಿಕಾದ ಪರ ನ್ಯಾಂಡ್ರೆ ಬರ್ಗರ್ ಹಾಗೂ ಡೇವಿಡ್ ಬೆಡಿಂಗಮ್ ಚೊಚ್ಚಲ ಟೆಸ್ಟ್ ಕ್ಯಾಪ್ ಧರಿಸಿದ್ದಾರೆ.
ಭಾರತ ತಂಡ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ.
ದ.ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಗುರಿ...
ಟ್ವೆಂಟಿ-20 ಹಾಗೂ ಏಕದಿನ ಸರಣಿಗಳ ಗೆಲುವಿನ ಬಳಿಕ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಜಯಿಸುವ ಗುರಿ ನೆಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.