ನವದೆಹಲಿ: ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಯಿತು.
ವಿರಾಟ್ ಕೊಹ್ಲಿ ಅವರ ಅಬ್ಬರದ ಶತಕದ ನೆರವಿನಿಂದ ಟೀಮ್ ಇಂಡಿಯಾ 7 ವಿಕೆಟ್ ನಷ್ಟಕ್ಕೆ 373 ರನ್ ಗಳಿಸಿದೆ. ಈ ಗುರಿಯನ್ನು ಬೆನ್ನಟ್ಟಲು ಶ್ರೀಲಂಕಾ ತಂಡ ಹರಸಾಹಸಪಡುತ್ತಿದೆ.
ಶ್ರೀಲಂಕಾ ತಂಡ 40 ಓವರ್‌ನಲ್ಲಿ 8 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಆಡುತ್ತಿದೆ.
ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರ ಜೊತೆಯಾಟದಿಂದ 143 ರನ್ ಭಾರತಕ್ಕೆ ಮತ್ತಷ್ಟು ಹೆಚ್ಚಿನ ಮೊತ್ತ ಪೇರಿಸಲು ನೆರವಾಯಿತು.
ರೋಹಿತ್ ಶರ್ಮಾ ಅವರು 9 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 83 ರನ್ ಗಳಿಸಿದರು. ವಿರಾಟ್ ಕೊಹ್ಲಿ 87 ಎಸೆತಗಳಲ್ಲಿ 113 ರನ್ ಗಳಿಸಿ, ವಿಶಿಷ್ಟ ದಾಖಲೆ ಬರೆದಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಇಂದಿನ ಪಂದ್ಯದಲ್ಲಿ ಸರಿಗಟ್ಟಿದ್ದಾರೆ.
ಉಳಿದಂತೆ, ಶುಭಮನ್ ಗಿಲ್ 70, ಕೆ. ಎಲ್. ರಾಹುಲ್ 39 ಮತ್ತು ಶ್ರೇಯಸ್ ಅಯ್ಯರ್ 28 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಸಾಥ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.