ADVERTISEMENT

IND vs SL | ಶ್ರೀಲಂಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿ ವೇಳಾಪಟ್ಟಿ ಪ್ರಕಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2024, 14:07 IST
Last Updated 11 ಜುಲೈ 2024, 14:07 IST
<div class="paragraphs"><p>ಟೀಮ್ ಇಂಡಿಯಾ</p></div>

ಟೀಮ್ ಇಂಡಿಯಾ

   

(ಚಿತ್ರ ಕೃಪೆ: X@BCCI)

ಬೆಂಗಳೂರು: ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತೀಯ ಕ್ರಿಕೆಟ್ ತಂಡ, ತಲಾ ಮೂರು ಪಂದ್ಯಗಳ ಟ್ವೆಂಟಿ-20 ಹಾಗೂ ಏಕದಿನ ಸರಣಿಗಳಲ್ಲಿ ಭಾಗವಹಿಸಲಿದೆ.

ADVERTISEMENT

ಈ ಸಂಬಂಧ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಟಿ20 ಸರಣಿಯ ಎಲ್ಲ ಪಂದ್ಯಗಳು ಪಲ್ಲೆಕೆಲೆ ಮೈದಾನದಲ್ಲಿ ಮತ್ತು ಏಕದಿನ ಸರಣಿಯು ಕೊಲಂಬೊದಲ್ಲಿ ಆಯೋಜನೆಯಾಗಲಿದೆ.

ಟಿ20 ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಸರಿಯಾಗಿ ಆರಂಭವಾಗಲಿದೆ. ಹಾಗೆಯೇ ಏಕದಿನ ಸರಣಿಯ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.

ಟಿ20 ಸರಣಿ ವೇಳಾಪಟ್ಟಿ:

  • ಜುಲೈ 26: ಮೊದಲ ಟಿ20

  • ಜುಲೈ 27: 2ನೇ ಟಿ20

  • ಜುಲೈ 29: 3ನೇ ಟಿ20

ಏಕದಿನ ಸರಣಿ ವೇಳಾಪಟ್ಟಿ:

  • ಆಗಸ್ಟ್ 1: ಮೊದಲ ಏಕದಿನ

  • ಆಗಸ್ಟ್ 4: 2ನೇ ಏಕದಿನ

  • ಆಗಸ್ಟ್ 7: 3ನೇ ಏಕದಿನ

ಏಕದಿನ ಹಾಗೂ ಟಿ20 ಸರಣಿಗೆ ಭಾರತ ತಂಡವನ್ನು ಇನ್ನಷ್ಟೇ ಘೋಷಿಸಬೇಕಿದೆ. ಹಾರ್ದಿಕ್ ಪಾಂಡ್ಯ ಅಥವಾ ಕೆ.ಎಲ್. ರಾಹುಲ್ ಮುನ್ನಡೆಸುವ ಸಾಧ್ಯತೆಯಿದೆ. ಏಕದಿನ ಸರಣಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಸೂಚಿಸುವ ಸಾಧ್ಯತೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.