ಮುಂಬೈ: ಮುಂದಿನ ತಿಂಗಳ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನ ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಭಾನುವಾರ ಪ್ರಕಟಿಸಿದೆ.
ಆಗಸ್ಟ್ 3ರಂದು ಆರಂಭವಾಗುವ ಈ ಪ್ರವಾಸದಲ್ಲಿ ಭಾರತ ಮೂರು ಟಿ–20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದ ವೇಗಿ ಜಸ್‌ಪ್ರೀತ್ ಬೂಮ್ರಾಗೆ ಏಕದಿನ ಹಾಗೂ ಟ್ವಿಂಟಿ–20 ಹಾಗೂ ಆಲೌರೌಂಡರ್ ಹಾರ್ದಿಕ್ ಪಾಂಡ್ಯಗೆ ಎಲ್ಲಾಮಾದರಿಗಳಿಂದಲ್ಲೂ ವಿಶ್ರಾಂತಿ ನೀಡಲಾಗಿದೆ.
ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಈಗಾಗಲೇ ಟೂರ್ನಿಯಿಂದ ದೂರ ಉಳಿಯುವುದಾಗಿ ತಿಳಿಸಿದ್ದು, ಅವರ ಬದಲಿಗೆ ರಿಷಭ್ ಪಂತ್‌ಗೆ ಅವಕಾಶ ನೀಡಲಾಗಿದೆ.
ಟೆಸ್ಟ್: ವಿರಾಟ್ ಕೊಹ್ಲಿ (ನಾಯಕ), ಅಂಜಿಕ್ಯ ರಹಾನೆ (ಉಪ ನಾಯಕ), ಮಯಾಂಕ್ ಅಗರವಾಲ್, ಕೆ.ಎಲ್. ರಾಹುಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್.ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಜಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ಉಮೇಶ್ ಯಾಧವ್
ಏಕದಿನ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ನವದೀಪ್ ಸೈನಿ
ಟ್ವಿಂಟಿ-20: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಾಹರ್, ನವದೀಪ್ ಸೈನಿ
ಇದನ್ನೂ ಓದಿ...ವಿಂಡೀಸ್ ಪ್ರವಾಸಕ್ಕೆ ತಂಡ ಆಯ್ಕೆ; ಹಿಂದೆ ಸರಿದ ಧೋನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.