ADVERTISEMENT

IND vs ENG | ಕೊಹ್ಲಿ ನಾಯಕನಾಗಿದ್ದರೆ ಭಾರತ ಸೋಲುತ್ತಿರಲಿಲ್ಲ: ಮೈಕಲ್ ವಾನ್

ಪಿಟಿಐ
Published 31 ಜನವರಿ 2024, 6:37 IST
Last Updated 31 ಜನವರಿ 2024, 6:37 IST
<div class="paragraphs"><p>ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ</p></div>

ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ

   

(ಸಂಗ್ರಹ ಚಿತ್ರ)

ಲಂಡನ್: ಹೈದರಾಬಾದ್‌ನಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿದ್ದರೆ ಭಾರತ ತಂಡ ಸೋಲುತ್ತಿರಲಿಲ್ಲ ಎಂದು ಇಂಗ್ಲೆಂಡ್‌ನ ಮಾಜಿ ನಾಯಕ ಮೈಕಲ್ ವಾನ್ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್‌ನಲ್ಲಿ 190 ರನ್‌ಗಳ ಮುನ್ನಡೆ ಗಳಿಸಿಯೂ ಟೀಮ್ ಇಂಡಿಯಾ ಸೋಲಿನ ಮುಖಭಂಗಕ್ಕೊಳಗಾಗಿತ್ತು.

ಭಾರತ ತಂಡಕ್ಕೆ ಹೈದರಾಬಾದ್‌ನಲ್ಲಿ ಎದುರಾದ ಮೊದಲ ಸೋಲು ಇದಾಗಿದೆ. ಇದರಿಂದಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಅನುಮಾನಗಳು ಎದ್ದಿವೆ.

ವೈಯಕ್ತಿಕ ಕಾರಣದಿಂದಾಗಿ ಮೊದಲೆರಡು ಪಂದ್ಯಗಳಿಗೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ.

'ಭಾರತ ತಂಡವು ವಿರಾಟ್ ಕೊಹ್ಲಿ ಅವರ ಕಪ್ತಾನಗಿರಿಯ ಅಭಾವವನ್ನು ಎದುರಿಸಿತು. ವಿರಾಟ್ ನಾಯಕನಾಗಿದ್ದರೆ ಭಾರತ ಸೋಲುತ್ತಿರಲಿಲ್ಲ. ರೋಹಿತ್ ಶರ್ಮಾ ಶ್ರೇಷ್ಠ ಆಟಗಾರ. ಆದರೆ ಈ ಪಂದ್ಯದಲ್ಲಿ ಸಂಪೂರ್ಣವಾಗಿ 'ಸ್ವಿಚ್ ಆಫ್' ಆಗಿದ್ದರು' ಎಂದು ಹೇಳಿದ್ದಾರೆ.

ರೋಹಿತ್ ಅವರ ನಾಯಕತ್ವವು ತೀರಾ ಸಾಧಾರಣ ಮಟ್ಟದಲ್ಲಿತ್ತು. ಪಂದ್ಯದಲ್ಲಿ ಪರಿಸ್ಥಿತಿಯನ್ನು ಮುಂಚಿತವಾಗಿ ಗ್ರಹಿಸಲು ಸಾಧ್ಯವಾಗಿಲ್ಲ. ಓಲಿ ಪೋಪ್ ಅವರ ಸ್ವೀಪ್ ಅಥವಾ ರಿವರ್ಸ್ ಸ್ವೀಪ್‌ಗೆ ಅವರ ಬಳಿ ಉತ್ತರ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

2022ರಲ್ಲಿ ನಾಯಕತ್ವ ಸ್ಥಾನವನ್ನು ವಿರಾಟ್ ಕೊಹ್ಲಿ ತ್ಯಜಿಸಿದ್ದರು.

ಮೊದಲ ಟೆಸ್ಟ್ ಪಂದ್ಯದಲ್ಲಿ 28 ರನ್ ಅಂತರದ ಗೆಲುವು ದಾಖಲಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಗಳಿಸಿದೆ. ಸರಣಿಯ ಎರಡನೇ ಪಂದ್ಯವು ಫೆಬ್ರುವರಿ 2ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.