ADVERTISEMENT

Champions Trophy | ಪಾಕಿಸ್ತಾನದಲ್ಲಿ ಆಡಲು ಭಾರತ ನಿರಾಕರಣೆ: ವರದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜುಲೈ 2024, 9:04 IST
Last Updated 11 ಜುಲೈ 2024, 9:04 IST
<div class="paragraphs"><p>ಟೀಮ್ ಇಂಡಿಯಾ</p></div>

ಟೀಮ್ ಇಂಡಿಯಾ

   

(ಪಿಟಿಐ ಚಿತ್ರ)

ಬೆಂಗಳೂರು: ಪಾಕಿಸ್ತಾನದ ಆತಿಥ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆಯೋಜನೆಯಾಗಲಿದೆ. ಆದರೆ ಭಾರತೀಯ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ತೆರಳಿ ಆಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ADVERTISEMENT

ಈ ಕುರಿತು ಬಿಸಿಸಿಐ ಮೂಲವನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಭಾರತದ ಎಲ್ಲ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಯೋಜಿಸುವ ಕುರಿತಾಗಿ ಪಾಕಿಸ್ತಾನ ಪ್ರಸ್ತಾವನೆ ಸಲ್ಲಿಸಿತ್ತು.

ಆದರೆ ಪಾಕಿಸ್ತಾನದ ಪ್ರಸ್ತಾವನೆಯನ್ನು ನಿರಾಕರಿಸಿರುವ ಬಿಸಿಸಿಐ, ಭಾರತದ ಪಂದ್ಯಗಳನ್ನು ಶ್ರೀಲಂಕಾ ಅಥವಾ ದುಬೈಯಲ್ಲಿ ಆಯೋಜಿಸುವಂತೆ ಐಸಿಸಿಗೆ ಮನವಿ ಮಾಡಲಿದೆ ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು 2025ರ ಫೆಬ್ರುವರಿ ಹಾಗೂ ಮಾರ್ಚ್ ತಿಂಗಳಲ್ಲಿ ಆಯೋಜನೆಯಾಗಲಿದೆ.

2008ರ ಏಷ್ಯಾ ಕಪ್ ನಂತರ ಉಭಯ ರಾಷ್ಟ್ರಗಳ ನಡುವಣ ಸಂಬಂಧ ಹದಗಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಭಾರತ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ಐಸಿಸಿ ಪ್ರಾಯೋಜಿತ ಟೂರ್ನಿಗಳಲ್ಲಿ ಮಾತ್ರ ಉಭಯ ರಾಷ್ಟ್ರಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.