ನವದೆಹಲಿ: ನವೆಂಬರ್ ತಿಂಗಳಲ್ಲಿ ಭಾರತ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಪ್ರವಾಸ ಮಾಡಲಿದ್ದು ಈ ವೇಳೆ ಬಾರ್ಡರ್–ಗಾವಸ್ಕರ್ ಟೆಸ್ಟ್ ಸರಣಿ ಆಡಲಿದೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ 2024–25ನೇ ಸಾಲಿನ ಬಾರ್ಡರ್–ಗಾವಸ್ಕರ್ ಟ್ರೋಫಿಯ ವೇಳಾಪಟ್ಟಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ.
ಬಾರ್ಡರ್–ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಇದೇ ಮೊದಲ ಸಲ ಐದು ಟೆಸ್ಟ್ ಪಂದ್ಯಗಳನ್ನು ಆಡಿಸಲಾಗುವುದು. ಇದುವರೆಗೆ ನಾಲ್ಕು ಪಂದ್ಯಗಳ ಸರಣಿ ಮಾತ್ರ ನಡೆಯುತ್ತಿತ್ತು ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಹೇಳಿದೆ.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ವೇಳಾಪಟ್ಟಿ...
ಮೊದಲ ಟೆಸ್ಟ್: ನವೆಂಬರ್ 22 ರಿಂದ 26, ಪರ್ತ್
ಎರಡನೇ ಟೆಸ್ಟ್: ಡಿಸೆಂಬರ್ 6 ರಿಂದ 10, ಅಡಿಲೇಡ್ (ಹಗಲು–ರಾತ್ರಿ)
ಮೂರನೇ ಟೆಸ್ಟ್: ಡಿಸೆಂಬರ್ 14 ರಿಂದ 18, ಬ್ರಿಸ್ಬೇನ್
ನಾಲ್ಕನೇ ಟೆಸ್ಟ್: ಡಿಸೆಂಬರ್ 26 ರಿಂದ 30, ಮೆಲ್ಬರ್ನ್
ಐದನೇ ಟೆಸ್ಟ್: ಜನವರಿ 3 ರಿಂದ 7, ಸಿಡ್ನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.