ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 27 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿಗೆ ಮುತ್ತಿಕ್ಕಿದೆ.
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ನಾಲ್ಕನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಅತ್ತ ಕೋಲ್ಕತ್ತ ತಂಡದ ಮೂರನೇ ಐಪಿಎಲ್ ಟ್ರೋಫಿ ಕನಸು ಭಗ್ನಗೊಂಡಿದೆ.
ಐಪಿಎಲ್‌ನಲ್ಲಿ ಚೆನ್ನೈ ಚಾಂಪಿಯನ್ ಆದ ವರ್ಷಗಳು:
2010, 2011, 2018 ಮತ್ತು 2021
ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಚೆನ್ನೈ ತಂಡವವು ಫಫ್ ಡುಪ್ಲೆಸಿ (86) ಬಿರುಸಿನ ಅರ್ಧಶತಕ ನೆರವಿನಿಂದ ಮೂರು ವಿಕೆಟ್ ನಷ್ಟಕ್ಕೆ 192 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಋತುರಾಜ್ ಗಾಯಕವಾಡ್ (32), ರಾಬಿನ್ ಉತ್ತಪ್ಪ (31) ಹಾಗೂ ಮೊಯಿನ್ ಅಲಿ (37*) ಜೊತೆಗೆ ತಲಾ ಅರ್ಧಶತಕಗಳ ಜೊತೆಯಾಟ ಕಟ್ಟಿದ ಡುಪ್ಲೆಸಿ 100ನೇ ಐಪಿಎಲ್ ಪಂದ್ಯವನ್ನು ಸ್ಮರಣೀಯವಾಗಿಸಿದರು.
ಬಳಿಕ ಗುರಿ ಬೆನ್ನತ್ತಿದ ಕೋಲ್ಕತ್ತ, ಆರಂಭಿಕರಾದ ವೆಂಕಟೇಶ್ ಅಯ್ಯರ್ (50) ಹಾಗೂ ಶುಭಮನ್ ಗಿಲ್ (51) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 164 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ಮೂಲಕ ಗಿಲ್-ಅಯ್ಯರ್ ಹೋರಾಟವು ವ್ಯರ್ಥವೆನಿಸಿದೆ.
15 ಓವರ್ ಅಂತ್ಯಕ್ಕೆ ಕೋಲ್ಕತ್ತ ಆರು ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿದೆ. ಅಂತಿಮ 30 ಎಸೆತಗಳಲ್ಲಿ ಗೆಲುವಿಗೆ 73 ರನ್ ಬೇಕಿದೆ.
10 ಓವರ್ ಅಂತ್ಯಕ್ಕೆ ಕೆಕೆಆರ್ ವಿಕೆಟ್ ನಷ್ಟವಿಲ್ಲದೆ 88 ರನ್ ಗಳಿಸಿದೆ. ಶುಭಮನ್ ಗಿಲ್ (38*) ಹಾಗೂ ವೆಂಕಟೇಶ್ ಅಯ್ಯರ್ (50*) ಕ್ರೀಸಿನಲ್ಲಿದ್ದಾರೆ.
ಬೃಹತ್ ಗುರಿ ಬೆನ್ನತ್ತಿದ ಕೆಕೆಆರ್‌ಗೆ ಶುಭಮನ್ ಗಿಲ್ ಹಾಗೂ ವೆಂಕಟೇಶ್ ಅಯ್ಯರ್ ಬಿರುಸಿನ ಆರಂಭವೊದಗಿಸಿದರು. 5 ಓವರ್ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 47 ರನ್ ಗಳಿಸಿದೆ.
ಫಫ್ ಡುಪ್ಲೆಸಿ (86) ಬಿರುಸಿನ ಅರ್ಧಶತಕ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಶುಕ್ರವಾರ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 192 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ.
ಫಫ್ ಹಾಗೂ ಋತುರಾಜ್ ಗಾಯಕವಾಡ್ ಮೊದಲ ವಿಕೆಟ್‌ಗೆ 61 ರನ್‌ಗಳ ಜೊತೆಯಾಟ ಕಟ್ಟಿದರು. ಬಳಿಕ ರಾಬಿನ್ ಉತ್ತಪ್ಪ ಜೊತೆಗೂ ಡುಪ್ಲೆಸಿ, ಕೇವಲ 25 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟ ನೀಡಿದರು. ಗಾಯಕವಾಡ್ 32 ರನ್ ಹಾಗೂ ಉತ್ತಪ್ಪ ಕೇವಲ 15 ಎಸೆತಗಳಲ್ಲಿ ಮೂರು ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು.
ಕೊನೆಯ ಹಂತದಲ್ಲಿ ಮೊಯಿನ್ ಅಲಿ ಅವರೊಂದಿಗೂ ಫಿಫ್ಟಿ ಜೊತೆಯಾಟದಲ್ಲಿ ಭಾಗಿಯಾದ ಡುಪ್ಲೆಸಿ ಚೆನ್ನೈ ತಂಡವು ಬೃಹತ್ ಮೊತ್ತ ಪೇರಿಸಲು ನೆರವಾದರು.
ಇನ್ನಿಂಗ್ಸ್‌ನ ಕೊನೆಯ ಎಸೆತದಲ್ಲಿ ಔಟ್ ಆದ ಡುಪ್ಲೆಸಿ, 7 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 86 ರನ್ ಗಳಿಸಿದರು. ಅತ್ತ ಮೊಯಿನ್ ಅಲಿ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿ ಔಟಾಗದೆ ಉಳಿದರು.
ರಾಬಿನ್ ಉತ್ತಪ್ಪ ಜೊತೆಗೂ ಫಫ್ ಡುಪ್ಲೆಸಿ ಬಿರುಸಿನ ಅರ್ಧಶತಕದ ಜೊತೆಯಾಟದಲ್ಲಿ ಭಾಗಿಯಾದರು. 15 ಎಸೆತಗಳನ್ನು ಎದುರಿಸಿದ ಉತ್ತಪ್ಪ ಮೂರು ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು.
13.3 ಓವರ್ ವೇಳೆಗೆ ಚೆನ್ನೈ ಎರಡು ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತ್ತು. 35 ಎಸೆತಗಳಲ್ಲಿ ಅರ್ಧಶತಕ ಬಾರಿಸಿರುವ ಡುಪ್ಲಿಸಿ, 100ನೇ ಐಪಿಎಲ್ ಪಂದ್ಯವನ್ನು ಸ್ಮರಣೀಯವಾಗಿಸಿದರು.
10 ಓವರ್ ಅಂತ್ಯಕ್ಕೆ ಚೆನ್ನೈ ಒಂದು ವಿಕೆಟ್ ನಷ್ಟಕ್ಕೆ ರನ್ ಗಳಿಸಿದೆ. ಫಫ್ ಡುಪ್ಲೆಸಿ (37*) ಹಾಗೂ ರಾಬಿನ್ ಉತ್ತಪ್ಪ (9*) ಕ್ರೀಸಿನಲ್ಲಿದ್ದಾರೆ.
ಋತುರಾಜ್ ಗಾಯಕವಾಡ್ (25*) ಹಾಗೂ ಫಾಫ್ ಡು ಪ್ಲೆಸಿಸ್ (16*) ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 61 ರನ್ ಗಳಿಸಿದರು. ಈ ಹಂತದಲ್ಲಿ ಉತ್ತಮವಾಗಿ ಆಡುತ್ತಿದ್ದ ಗಾಯಕವಾಡ್ (32) ಅವರನ್ನು ಸುನಿಲ್ ನಾರಾಯಣ್ ಹೊರದಬ್ಬಿದರು. ಫಫ್ ಡುಪ್ಲೆಸಿ (27*) ಕ್ರೀಸಿನಲ್ಲಿದ್ದಾರೆ.
ಚೆನ್ನೈ ತಂಡಕ್ಕೆ ಋತುರಾಜ್ ಗಾಯಕವಾಡ್ (25*) ಹಾಗೂ ಫಫ್ ಡು ಪ್ಲೆಸಿಸ್ (16*) ಉತ್ತಮ ಆರಂಭವೊದಗಿಸಿದರು. 5 ಓವರ್ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವಿರುದ್ಧ ನಡೆಯುತ್ತಿರುವ ಐಪಿಎಲ್ 2021 ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕ ಏಯಾನ್ ಮಾರ್ಗನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.