ದುಬೈ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಓರ್ವ ಆಟಗಾರನಲ್ಲಿ ಕೋವಿಡ್ ಸೋಂಕು ದೃಢಗೊಂಡಿದೆ.
ಇದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್‌ನಲ್ಲಿ ದುಬೈಯಲ್ಲಿ ಇಂದು (ಬುಧವಾರ) ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ನಡೆಯಬಹುದೇ ಎಂಬ ಅನುಮಾನ ಕಾಡುತ್ತಿದೆ.
ತಂಡೆದೆಲ್ಲ ಆಟಗಾರರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಫಲಿತಾಂಶನೆಗೆಟಿವ್ ಬಂದರೆ ಮಾತ್ರ ಪಂದ್ಯ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಐಪಿಎಲ್ ಅಧಿಕೃತ ಟ್ವೀಟ್ ಮಾಡಿದ್ದು, ಸನ್‌ರೈಸರ್ಸ್ ತಂಡದ ಎಡಗೈ ವೇಗಿ ಟಿ. ನಟರಾಜನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದನ್ನು ದೃಢಪಡಿಸಿದೆ. ಅಲ್ಲದೆ ಅವರ ನಿಕಟ ಸಂಪರ್ಕದಲ್ಲಿದ್ದ ಆರು ಮಂದಿ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಸಹ ಆಟಗಾರ ವಿಜಯ್ ಶಂಕರ್, ತಂಡದ ವ್ಯವಸ್ಥಾಪಕ ವಿಜಯ್ ಕುಮಾರ್, ಫಿಸಿಯೋಥೆರಪಿಸ್ಟ್ ಶ್ಯಾಮ್ ಸುಂದರ್ ಜೆ, ವೈದ್ಯ ಅಂಜನಾ ವಣ್ಣನ್, ಲಾಜಿಸ್ಟಿಕ್ ಮ್ಯಾನೇಜರ್ ತುಷಾರ್ ಖಾಡೇಕರ್ ಹಾಗೂ ನೆಟ್ ಬೌಲರ್ ಪೆರಿಯಸಾಮಿ ಗಣೇಶನ್ ಪ್ರತ್ಯೇಕ ವಾಸದಲ್ಲಿದ್ದಾರೆ.
ನಿಕಟ ಸಂಪರ್ಕದಲ್ಲಿದ್ದ ಇತರೆಲ್ಲ ಆಟಗಾರರನ್ನು ಸ್ಥಳೀಯ ಕಾಲಮಾನ ಬೆಳಗ್ಗೆ 5 ಗಂಟೆಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ಫಲಿತಾಂಶ ವರದಿಯಾಗಿವೆ. ಹಾಗಾಗಿ ಪಂದ್ಯ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.