ಮುಂಬೈ: ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕಳಪೆ ಬ್ಯಾಟಿಂಗ್ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ಇದು ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನದ ಮೇಲೂ ಅಡ್ಡ ಪರಿಣಾಮ ಬೀರಿದೆ.
ಐಪಿಎಲ್ 2022 ಟೂರ್ನಿಯಲ್ಲಿ ಮುಂಬೈ ಸತತ ಎಂಟನೇ ಸೋಲಿನ ಮುಖಭಂಗಕ್ಕೆ ಒಳಗಾಗಿದೆ.
ಎಲ್ಲ ಮೂರು ಮಾದರಿಯಲ್ಲೂ ಟೀಮ್ ಇಂಡಿಯಾದ ಕಪ್ತಾನಗಿರಿ ವಹಿಸುತ್ತಿರುವ ರೋಹಿತ್, ನಾನ್-ಸ್ಟಾಪ್ ಕ್ರಿಕೆಟ್ ಆಡುತ್ತಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ಹೆಚ್ಚಿನ ಹೊರೆ ಉಂಟು ಮಾಡಿದೆ.
ಹಾಗಾಗಿ ರೋಹಿತ್ ನಾಯಕತ್ವವನ್ನು ಹಸ್ತಾಂತರ ಮಾಡಬೇಕು ಎಂಬುದರ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿವೆ. ಈ ಸ್ಥಾನಕ್ಕೆ ಜಸ್‌ಪ್ರೀತ್ ಬೂಮ್ರಾ ಅಥವಾ ಸೂರ್ಯಕುಮಾರ್ ಯಾದವ್ ಅವರನ್ನು ಪರಿಗಣಿಸುವ ಕುರಿತುಊಹಾಪೋಹಗಳು ಎದ್ದಿವೆ.
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಹಾಗೂ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಉಪ ನಾಯಕನ ಜವಾಬ್ದಾರಿಯನ್ನು ಬೂಮ್ರಾ ವಹಿಸಿದ್ದರು. ಅಲ್ಲದೆ ಮುಂಬೈ ಪರ ಸ್ಥಿರ ಪ್ರದರ್ಶನ ಕಾಯ್ದುಕೊಂಡಿದ್ದಾರೆ.
ಇನ್ನೊಂದೆಡೆ ಅಮೋಘ ಲಯದಲ್ಲಿರುವ ಸೂರ್ಯಕುಮಾರ್, ಪ್ರಸಕ್ತ ಸಾಲಿನಲ್ಲಿ ಆರು ಪಂದ್ಯಗಳಲ್ಲಿ 47.80ರ ಸರಾಸರಿಯಲ್ಲಿ 239 ರನ್ ಗಳಿಸಿದ್ದಾರೆ.
ಇವರಿಬ್ಬರನ್ನು ಹೊರತುಪಡಿಸಿದರೆ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್, ಕೆಟ್ಟ ಪ್ರದರ್ಶನ ನೀಡಿರುವುದು ಹಿನ್ನಡೆಗೆ ಕಾರಣವಾಗಿದೆ.
ಐಪಿಎಲ್ ಟೂರ್ನಿಯ ಅರ್ಧದಲ್ಲಿ ಫ್ರಾಂಚೈಸ್‌ಗಳ ನಾಯಕತ್ವ ಬದಲಾವಣೆಯ ಪರ್ವ ಹೊಸತೇನಲ್ಲ. ಇದರಿಂದ ರೋಹಿತ್ ಮೇಲಿನ ಹೊರೆ ಕಡಿಮೆಯಾಗಲಿದ್ದು, ಮುಂಬೈ ತಂಡದ ಅದೃಷ್ಟ ಬದಲಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.