ADVERTISEMENT

IPL 2022: ಅಹಮದಾಬಾದ್, ಲಖನೌ- ನೂತನ ಫ್ರಾಂಚೈಸಿಗಳು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಅಕ್ಟೋಬರ್ 2021, 5:47 IST
Last Updated 22 ಅಕ್ಟೋಬರ್ 2021, 5:47 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಹೊಸ ಐಪಿಎಲ್‌ ಫ್ರಾಂಚೈಸಿಗಳ ರೇಸ್‌ನಲ್ಲಿ ಗುಜರಾತ್‌ನ ಅಹಮದಾಬಾದ್‌ ಮತ್ತು ಉತ್ತರ ಪ್ರದೇಶದ ಲಖನೌ ನಗರಗಳು ಮುಂಚೂಣಿಯಲ್ಲಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಹಮದಾಬಾದ್‌ ಫ್ರಾಂಚೈಸಿಯನ್ನು ಖರೀದಿಸಲು ಭಾರತದ ಬಹುರಾಷ್ಟ್ರೀಯ ಕಂಪನಿ ಅದಾನಿ ಗ್ರೂಪ್ ಮುಂದಾಗಿದೆ. ಬ್ರಿಟನ್‌ ಮೂಲದ ಮ್ಯಾಂಚೆಸ್ಟರ್ ಯುನೈಟೆಡ್‌ ಸಹ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದ ಕಾಗದಗಳನ್ನು ಪಡೆದುಕೊಂಡಿದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಐಪಿಎಲ್‌ನ ಎರಡು ಹೊಸ ತಂಡಗಳ ಹರಾಜು ಪ್ರಕ್ರಿಯೆ ಅಕ್ಟೋಬರ್ 25 ರಂದು ನಡೆಯುವ ಸಾಧ್ಯತೆ ಇದೆ. ಆ ಮೂಲಕ ಮುಂದಿನ ವರ್ಷದಿಂದ ಐಪಿಎಲ್ ಟೂರ್ನಿಯಲ್ಲಿ 10 ತಂಡಗಳು ಸೆಣಸಲಿವೆ.

ADVERTISEMENT

ಆರ್‌ಪಿಜಿ ಸಂಜೀವ್ ಗೋಯೆಂಕಾ ಗ್ರೂಪ್, ಹಿಂದೂಸ್ತಾನ್ ಟೈಮ್ಸ್ ಮೀಡಿಯಾ, ಜಿಂದಾಲ್ ಸ್ಟೀಲ್ ಸೇರಿದಂತೆ ಟೊರೆಂಟ್, ಸಿಂಗಾಪುರ ಮೂಲದ ಪಿಇ ಸಂಸ್ಥೆ, ನವೀನ್ ಜಿಂದಾಲ್ - ಜಿಂದಾಲ್ ಪವರ್ & ಸ್ಟೀಲ್ ಕಂಪನಿಗಳು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.